Belur Gopalakrishna ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳುವುದರ ಮೂಲಕ ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕಾಗಿದೆ ಎಂದರು.
Belur Gopalakrishna ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಇತ್ತೀಚಿನ ದಿನಗಳಲ್ಲಿ ನಿರಾಸಕ್ತಿ ಹೊಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳು ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.ಅವರಲ್ಲಿರುವ ಕೌಶಲ್ಯ ,ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೇಯೆ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡುತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಪೋಷಕರಲ್ಲಿ ಹಿಂಜರಿಕೆ ಬೇಡ ಹಾಗೇಯೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿದ್ದು ಅವರುಗಳಿಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟರೆ ಅವರು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದರು.