RTO Office Shimoga ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
RTO Office Shimoga ಸಭೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಆಟೋಗಳಿಗೆ ಕುರಿತ ಪರವಾನಿಗೆ ಕುರಿತಾದ ವಿಷಯ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.