Saturday, October 17, 2026
Saturday, October 17, 2026

New Year Celebration ಹೊಸ ವರ್ಷಾಚರಣೆ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ- ಸತೀಶ್ ಚಂದ್ರ

Date:

New Year Celebration ಹೊಸ ವರ್ಷ ಎಲ್ಲರ ಜೀವನದಲ್ಲಿ ಸದಾ ಹರ್ಷ ತರಲಿ, ಕಳೆದುಹೋದ ಕಹಿ ನೆನಪುಗಳನ್ನು ಮರೆತು, ಕಲಿತ ಪಾಠಗಳನ್ನು ಅನುಭವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ರೋಟರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಹೊಸ ವರ್ಷಾಚರಣೆ ಸಂಭ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿ, ನಾವೆಲ್ಲರೂ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆ ಆಗುತ್ತದೆ. ಎಲ್ಲರೂ ಒಟ್ಟಾಗಿ ಸಾಗುವುದರಿಂದ ಮನೋಶಕ್ತಿ ವೃದ್ಧಿಸುತ್ತದೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ ಮಾತನಾಡಿ, ರೋಟರಿ ಸದಸ್ಯರು ಎಲ್ಲರೂ ಒಟ್ಟುಗೂಡಿ ಅತ್ಯಂತ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಕುಟುಂಬದ ಸದಸ್ಯರೊಂದಿಗೆ ಆಚರಿಸುತ್ತಿರುವುದು ವಿಶೇಷವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಳ್ಳುವುದು ಮುಖ್ಯ ಎಂದರು.

ಗಾಯಕ ಜಿ.ವಿಜಯಕುಮಾರ್, ಆಕಾಶವಾಣಿ ಗಾಯಕಿ ವಸಂತ ಮಾಧವ ಅವರಿಂದ ಜನಪದ ಗೀತೆಗಳ ಗಾಯನ, ಹಳೇಯ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಮನೋರಂಜನಾ ಚಟುವಟಿಕೆ, ಆಟೋಟಗಳನ್ನು ನಡೆಸಲಾಯಿತು.

ದಂಪತಿ ಹಾಗೂ ಮಕ್ಕಳಿಗೆ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಿಗೆ ವಿಶೇಷ ಬಹುಮಾನಗಳನ್ನು ನೀಡಿ ಅಭಿನಂದಿಸಲಾಯಿತು.

ಶಕ್ತಿಧಾಮ ಟೌನಶಿಪ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಹಾಲಸ್ವಾಮಿ ಮಾತನಾಡಿ ಎಲ್ಲರಿಗೂ ಹೊಸ ವರ್ಷದ ಶುಭಾಶಯ ಕೋರಿದರು.

New Year Celebration ಮಾಜಿ ಸಹಾಯಕ ಗವರ್ನರ್ ವಸಂತ ಹೋಬಳಿದಾರ್, ಮಾಜಿ ಅಧ್ಯಕ್ಷರಾದ ಶ್ರೀಕಾಂತ್, ಎ.ಟಿ.ಸುಬ್ಬೇಗೌಡ, ಮಹೇಶ್.ಎ.ಒ., ಆದಿಮೂರ್ತಿ.ಎಚ್.ಬಿ., ನಾಗವೇಣಿ, ಮಂಜುನಾಥ ಕದಂ, ಸುಮತಿ ಕುಮಾರಸ್ವಾಮಿ, ಮುಕುಂದಗೌಡ, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ಗಣೇಶ್, ಅರುಣ್ ದೀಕ್ಷಿತ್, ಕಿಶೋರ್ ಕುಮಾರ್, ಸಿ.ಕೆ.ವಿಜಯಕುಮಾರ್, ವಿಜಯಪ್ರಕಾಶ್, ರೋಟರಿ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...