Thursday, June 18, 2026
Thursday, June 18, 2026

Sports News ಶಿವಮೊಗ್ಗ ಪಶುವೈದ್ಯಕೀಯ ಕಾಲೇಜಿಗೆ ಲೆದರ್ ಬಾಲ್ ಕ್ರಿಕೆಟ್ ಟಿ- 20 ಪಂದ್ಯದಲ್ಲಿ ಜಯ

Date:

Sports News ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯಮಟ್ಟದ 17ನೇ ಅಂತರ್ ಮಹಾವಿದ್ಯಾಲಯ ಲೆದರ್ ಬಾಲ್ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದ ತಂಡವು ಬೆಂಗಳೂರು ಪಶು ವೈದ್ಯಕೀಯ ಮಹಾವಿದ್ಯಾಲಯದ ತಂಡವನ್ನು ಅಂತಿಮ ಫೈನಲ್ ಪಂದ್ಯದಲ್ಲಿ ಪರಾಭವಗೊಳಿಸಿ ಪ್ರಥಮ ಸ್ಥಾನವನ್ನು ಗಳಿಸಿತು .

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಬೆಂಗಳೂರು ತಂಡವು 20 ಓವರ್ ಗಳಿಗೆ ಏಳು ವಿಕೆಟ್ಗಳನ್ನು ಕಳೆದುಕೊಂಡು 94 ರನ್ಗಳನ್ನು ಗಳಿಸಿತು . ಈ ಮೊತ್ತವನ್ನು ಬೆನ್ನಟ್ಟಿದ ಶಿವಮೊಗ್ಗ ತಂಡವು 13.3 ಓವರ್ ಗಳಿಗೆ ಒಂದು ವಿಕೆಟ್ ನಷ್ಟಕ್ಕೆ 97 ರನ್ ಗಳಿಸುವುದರೊಂದಿಗೆ ಈ ಪಂದ್ಯಾವಳಿಯ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು .

ವಿದ್ಯಾರ್ಥಿಗಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ರವರು ತರಬೇತಿಯನ್ನು ನೀಡಿರುವುದು ಮತ್ತೊಂದು ವಿಶೇಷ.

Sports News ವಿಜಯಶಾಲಿಯಾದ ವಿದ್ಯಾರ್ಥಿಗಳಿಗೆ ಪಶು ಮಹಾವಿದ್ಯಾಲಯ ಶಿವಮೊಗ್ಗ ಡೀನ್ ರವರಾದ ಡಾಕ್ಟರ್ ಗಣೇಶ್ ಉಡುಪ ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...