Thursday, March 19, 2026
Thursday, March 19, 2026

Agriculture News ರೈತರಿಗೆ ಮೇವು ಬೆಳೆಗಳ ತರಬೇತಿ ಶಿಬಿರ

Date:

Agriculture News ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹಸಿರು ಮೇವಿನ ತಳಿಗಳ ಪ್ರದರ್ಶನ ಹಾಗೂ ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ (ಪ್ರಾಯೋಗಿಕ ತರಬೇತಿ), ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ. ಮಲೆನಾಡು ಗಿಡ್ಡ ತಳಿಯ ಹಾಲು, ಸಗಣಿ ಮತ್ತು ಗಂಜಳದಿಂದ ತಯಾರಿಸಲಾದ ವಿವಿಧ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

Agriculture News ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ತಮ್ಮ ಹೆಸರನ್ನು ಡಾ. ಹರೀಶ್ ಎಂ.-9470747820 ಹಾಗೂ ಡಾ. ವೆಂಕಟೇಶ್ -9482373685 ಮೊಬೈಲ್ ನಂ.ಗಳಿಗೆ ಎಸ್.ಎಂ.ಎಸ್./ವಾಟ್ಸ್‍ಪ್ ಮೂಲಕ ಅಥವಾ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ನೇರ ಸಂಪರ್ಕ ಮಾಡಿ ನೊಂದಾಯಿಸಿಕೊಳ್ಳುವಂತೆ ವಿಭಾಗದ ಸಹ ಪ್ರಾಧ್ಯಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...