Friday, April 18, 2025
Friday, April 18, 2025

Yuva Nidhi Scheme ಯುವನಿಧಿ ಫಲಾನುಭವಿಗಳಾಗಲು ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ?

Date:

Yuva Nidhi Scheme ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ‘ಯುವನಿಧಿ’ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಅಭ್ಯರ್ಥಿಯ ಬ್ಯಾಂಕ್ ಪಾಸ್‍ಪುಸ್ತಕ, ಇತ್ಯಾದಿ ದಾಖಲಾತಿಗಳೊಂದಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

Yuva Nidhi Scheme ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಶಿವಮೊಗ್ಗ ದೂ.ಸಂ: 08182-255293 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....