Wednesday, September 16, 2026
Wednesday, September 16, 2026

DC Shivamogga ಉಪಖನಿಜ ಸಾಗಣೆ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

Date:

DC Shivamogga ಉಪ ಖನಿಜಗಳ ಅಕ್ರಮ ಗಣಿಗಾರಿಕೆ / ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್, 2011 ರೂಲ್ (7)ರ ಅನ್ವಯ ಕಟ್ಟಡ ಕಲ್ಲು, ಜಲ್ಲಿ, ಎಂ ಸ್ಯಾಂಡ್, ಮರಳು ಹಾಗೂ ಮಣ್ಣು ಇತ್ಯಾದಿ ಉಪ ಖನಿಜ ಸಾಗಾಣ ಕೆ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳು/ ಜಿಲ್ಲಾ ಟಾಸ್ಕ್ ಪೋರ್ಸ್ (ಗಣ ) ಸಮಿತಿ ಅಧ್ಯಕ್ಷರು ಆದ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ.

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ ಒಟ್ಟು 583 ಖನಿಜ ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಉಪಕರಣಗಳನ್ನು ಅಳವಡಿಸಲಾಗಿದ್ದು, ಜಿಪಿಎಸ್ ಉಪಕರಣವನ್ನು ಅಳವಡಿಸಿಕೊಳ್ಳದ/ ಜಿಪಿಎಸ್ ಉಪಕರಣವನ್ನು ಅಳವಡಿಕೆ ಮಾಡಿಕೊಂಡು ಒಂದು ಪರವಾನಿಗೆಯಿಂದ ಒಂದಕ್ಕಿಂತ ಹೆಚ್ಚು ಬಾರಿ ಮರಳು ಸಾಗಾಣ ಕೆ ಮಾಡಿರುವುದು, ವಾಹನ ಸಾಮರ್ಥ್ಯಕ್ಕಿಂತ ಕಡಿಮೆ ಪ್ರಮಾಣವನ್ನು ಪರವಾನಿಗೆಯಲ್ಲಿ ನಮೂದಿಸುವುದು, ಜಿ.ಪಿ.ಎಸ್. ಅಳವಡಿಸಿಕೊಂಡು ಸೇವಾದಾರ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿರಿಸಿಕೊಳ್ಳದ, ಪರವಾನಿಗೆ ಪ್ರಮಾಣಕ್ಕಿಂತ ಹೆಚ್ಚಿನ ಮರಳನ್ನು ಸಾಗಾಣ ಕೆ ಮಾಡುವಂತಹ ವಾಹನಗಳ ಮೇಲೆ ಕ.ಉ.ಖ.ರಿಯಾಯಿತಿ ನಿಯಮಾಳಿಯನ್ವಯ ಅಗತ್ಯ ಕ್ರಮಗಳನ್ನು ಕೈಗೊಂಡು ನಿಯಮಾನುಸಾರ ದಂಡ/ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...