Sunday, December 7, 2025
Sunday, December 7, 2025

CNR Rao Education Foundation ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳದ್ದು ಮಹತ್ತರ ಪಾತ್ರ- ಎಚ್.ಎಲ್.ಎಸ್.ರಾವ್

Date:

CNR Rao Education Foundation ವಿದ್ಯಾರ್ಥಿಗಳು ಮೂಲ ವಿಜ್ಞಾನ ವಿಷಯ ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಅತ್ಯಂತ ಅವಶ್ಯಕ. ವಿಜ್ಞಾನಿಗಳಾಗಿ ದೇಶಕ್ಕೆ ಕೊಡುಗೆ ನೀಡುವ ಸಂಕಲ್ಪ ಮಾಡಬೇಕು ಎಂದು ಸಾಗರ ವಿಜ್ಞಾನ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಎಚ್.ಎಲ್.ಎಸ್.ರಾವ್ ಅಭಿಪ್ರಾಯಪಟ್ಟರು.

ಸಾಗರದ ಮಲೆನಾಡು ಸಿರಿ ಸಭಾಂಗಣದಲ್ಲಿ ಸಾಗರ ವಿಜ್ಞಾನ ವೇದಿಕೆ ವತಿಯಿಂದ ಸಿಎನ್‌ಆರ್ ರಾವ್ ಎಜುಕೇಷನ್ ಫೌಂಡೇಷನ್ ಸಹಯೋಗದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಾನುವಾರ ಆಯೋಜಿಸಿದ್ದ “ವಿಜ್ಞಾನ ತರಬೇತಿ ಶಿಬಿರ” ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಜ್ಞಾನಿಗಳಾಗಿ ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಬೇಕು. ಮೂಲ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಪದವಿ, ಸ್ನಾತಕೋತ್ತರ ಹಂತಗಳಲ್ಲಿ ವಿಜ್ಞಾನವನ್ನು ಪ್ರಮುಖ ವಿಷಯವಾಗಿ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.

ಸಾಗರ ವಿಜ್ಞಾನ ವೇದಿಕೆಯು 2011ರಿಂದ ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವುದು, ದೇಶದ ವಿವಿಧ ರಾಜ್ಯಗಳ ವಿಜ್ಞಾನಿಗಳನ್ನು ಕರೆಯಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದು, ಸಂಶೋಧನಾ ವಿಜ್ಞಾನಿಗಳಿಂದ ಮಾರ್ಗದರ್ಶನ ಒದಗಿಸುವ ಕೆಲಸವನ್ನು ವೇದಿಕೆ ನಡೆಸುತ್ತಿದೆ ಎಂದರು.

CNR Rao Education Foundation ಜೆಎನ್‌ಸಿಎಎಸ್‌ಆರ್ ಇಟಿಯು ಸಂಯೋಜಕ ವಿನಾಯಕ ಪತ್ತಾರ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳ ಕೊಡುಗೆಯು ಮಹತ್ತರ ಪಾತ್ರ ವಹಿಸುತ್ತದೆ. ವಿಜ್ಞಾನಿಗಳ ಕೊಡುಗೆಯಿಂದ ದೇಶವು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಶೇಷ ಹೆಜ್ಜೆ ಇಡುತ್ತಿದೆ. ವಿಜ್ಞಾನಿ ಆಗುವ ಮುಖಾಂತರ ದೇಶದ ಅಭಿವೃಧ್ಧಿಯಲ್ಲಿ ನಾನು ಪಾಲ್ಗೊಳ್ಳಬೇಕು ಎನ್ನುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಎಂದು ಹೇಳಿದರು.

ಪ್ರತಿ ನಿತ್ಯದ ಜೀವನದಲ್ಲಿ ವಿಜ್ಞಾನದ ಅಂಶವು ಒಳಗೊಂಡಿರುತ್ತದೆ. ಆದರೆ ಸರಿಯಾದ ಗಮನಿಸುವಿಕೆ ಇರುವುದಿಲ್ಲ. ದಿನ ಸೋಲಾರ್ ಬಳಕೆ ಮಾಡುತ್ತಿದ್ದರೂ ಅದರ ವೈಜ್ಞಾನಿಕ ರಚನೆ ಬಗ್ಗೆ ನಾವು ಯೋಚಿಸಿರುವುದೇ ಇಲ್ಲ. ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಹೊಂದಿರುವ ಯುವಜನರು ವೈಜ್ಞಾನಿಕ ಆಲೋಚನಾ ಕ್ರಮ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಸಾಗರ ವಿಜ್ಞಾನ ವೇದಿಕೆಯ ನಿರ್ದೇಶಕ ವಿ.ಸಿ.ಪಾಟೀಲ್ ಮಾತನಾಡಿ, ನಮ್ಮ ವೇದಿಕೆ ವತಿಯಿಂದ ವಿಜ್ಞಾನ ಕೇಂದ್ರ ಕಟ್ಟಡ ನಿರ್ಮಾಣ ಆಗುತ್ತಿದ್ದು, ಶೇ. 80ರಷ್ಟು ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಪ್ರಮುಖ ವಿಜ್ಞಾನ ಕೇಂದ್ರವಾಗಿ ಸಾಗರದ ಕಟ್ಟಡ ರೂಪುಗೊಳ್ಳಲಿದೆ. ಲ್ಯಾಬ್, ಸಂಶೋಧನಾ ಘಟಕ, ತರಬೇತಿ ಸಭಾಂಗಣ ಸೇರಿದಂತೆ ವಿಜ್ಞಾನ ತರಬೇತಿ ಶಿಬಿರ ನಡೆಸಲು ಪೂರಕ ವಾತಾವರಣ ನಿರ್ಮಾಣ ಆಗಲಿದೆ ಎಂದು ತಿಳಿಸಿದರು.

ಸಾಗರ ವಿಜ್ಞಾನ ವೇದಿಕೆ ಅಧ್ಯಕ್ಷ ಡಾ. ಎಚ್.ಎಸ್.ಜೀವನ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆ ಆಡಳಿತಾಧಿಕಾರಿ ರವಿಕುಮಾರ್.ಎಂ.ಎಂ. ಮತ್ತಿತರರು ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...