Monday, November 25, 2024
Monday, November 25, 2024

Child Welfare Institution ಜಿಲ್ಲೆಯಲ್ಲಿನ ಮಕ್ಕಳ ಪಾಲನಾ ಸಂಸ್ಥೆಗಳು ಬಾಲ ನ್ಯಾಯ ಮಂಡಳಿ ಲೈಸನ್ಸ್ ಪಡೆಯುವುದು ಕಡ್ಡಾಯ

Date:

Child Welfare Institution ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳು ಬಾಲನ್ಯಾಯ ಕಾಯ್ದೆ 2015 ರಡಿ ನೋಂದಣಿ ಮತ್ತು ನವೀಕರಣಗೊಂಡ ಪ್ರಮಾಣ ಪತ್ರ ಪಡೆದು ಕಾರ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.

ಆದ್ದರಿಂದ ಸಂಸ್ಥೆಗಳು ಬಾಲನ್ಯಾಯ ಕಾಯ್ದೆ 2015 ರಡಿ ನೋಂದಣಿಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ನೋಂದಣಿಯಾಗದೇ ಇದ್ದಲ್ಲಿ ನೋಂದಣಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವುದು. ಒಂದು ವೇಳೆ ನೋಂದಣಿಯಾಗದೇ ಮಕ್ಳಳ ಪಾಲನಾ ಸಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದರೆ, ಇಲಾಖಾ ಅಧಿಕಾರಿಗಳ ಪರಿಶೀಲನೆ ಸಂದರ್ಭದಲ್ಲಿ ಇದು ಕಂಡು ಬಂದರೆ ಅವರ ವಿರುದ್ದ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 33, 34, 41, 42 ಮತ್ತು 75 ರಡಿ ಕಾನೂನು ಕ್ರಮ ಜರುಗಿಸಲಾಗುತ್ತದೆ.

Child Welfare Institution ಜಿಲ್ಲೆಯಲ್ಲಿ ಇಲಾಖೆಯ ಅನುಮತಿ ಪಡೆಯದೆ ನೋಂದಾಯಿತವಲ್ಲದ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ಇಟ್ಟುಕೊಳ್ಳುವುದು ಪಾಲನೆ ಮತ್ತು ಪೋಷಣೆ ನಡೆಸುತ್ತಿರುವ ಮಾಹಿತಿ ಇದ್ದಲ್ಲಿ, ಸದರಿ ಸಂಸ್ಥೆಗಳ ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೊಳ, ಸಿವಮೊಗ್ಗ, ದೂ.ಸಂ: 08182-295709 ನ್ನು ಸಂಪರ್ಕಿಸಿ ಜ.20 ರೊಳಗಾಗಿ ಮಾಹಿತಿ ನೀಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾದಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...