Boxing Competition ಇತ್ತೀಚೆಗೆ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ಶೇಕ್ ಮೊಹಮ್ಮದ್ ಸಾದ್ ಡಿಸೆಂಬರ್ 23 ರಿಂದ 25 ರವರೆಗೆ ಬೆಂಗಳೂರಿನ ಜಯಪ್ರಕಾಶ ನಾರಾಯಣ ನ್ಯಾಷನಲ್ ಯೂತ್ ಟ್ರೈನಿಂಗ್ ಸೆಂಟರ್ ನಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಆಯೋಜಿಸಿದ
ರಾಜ್ಯಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ ಸಾಗರದ ಬಾಕ್ಸರ್ -75 ಕೆಜಿ ತೂಕದ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುವ ಸಲುವಾಗಿ ಸಾಗರದ ಶಾಸಕರ ಬೆಳ್ಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
Boxing Competition ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಪ್ಪ ಕಾಲೇಜಿನ ಪ್ರಾಂಶುಪಾಲರಾದ ಸತ್ಯನಾರಾಯಣ ಕೆ ಸಿ ಉಪಸಿತರಿದ್ದರು.
ಸನ್ಮಾನಿತ ಕ್ರೀಡಾಪಟುವಿಗೆ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿ ಶಿವಮೊಗ್ಗ ವಿನೋದ್ ಅಭಿನಂದನೆ ತಿಳಿಸಿದ್ದಾರೆ.