Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇಯ ವರ್ಷದ ಪುಸ್ತಕ ಬಹುಮಾನಕ್ಕಾಗಿ ಅತ್ಯುತ್ತಮ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.
2022ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣಬರಹ, ಅನುವಾದ-1 ಮತ್ತು 2, ಲೇಖಕತ ಮೊದಲ ಸ್ವತಂತ್ರಕೃತಿ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ ೪ ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಫೆಬ್ರವರಿ 2 ರೊಳಗಾಗಿ ಸಲ್ಲಿಸುವುದು.
ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತಿಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
Karnataka Sahitya Academy ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ದೂ.ಸಂ.:080-22211730/22106460 ಗಳನ್ನು ಸಂಪರ್ಕಿಸುವುದು.