Wednesday, September 16, 2026
Wednesday, September 16, 2026

Inner Wheel Shivamogga ಶಿವಮೊಗ್ಗ ಇನ್ನರ್ ವೀಲ್ ಕ್ಲಬ್ ನಿಂದ ಫಲಾನುಭವಿಗಳಿಗೆ ವೀಲ್ ಚೇರ್ ವಿತರಣೆ

Date:

Inner Wheel Shivamogga ವಿಶ್ವದ ಎಲ್ಲೆಡೆಯು ಇನ್ನರ್‌ವ್ಹೀಲ್ ವತಿಯಿಂದ ಸೇವಾ ಕಾರ್ಯಗಳು ನಡೆಯುತ್ತಿದ್ದು, ಮನುಕುಲದ ಸೇವೆಯು ಶ್ರೇಷ್ಠ ಕಾರ್ಯ ಎಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಶ್ವೇತಾ ಆಶಿತ್ ಹೇಳಿದರು.

ಶಿವಮೊಗ್ಗ ನಗರದ ನಾಗೇಂದ್ರ ಬಡಾವಣೆಯ ರಾಜುವೇಲು ಅವರಿಗೆ ಇನ್ನರ್‌ವ್ಹೀಲ್ ಶಿವಮೊಗ್ಗ ಸಂಸ್ಥೆ ವತಿಯಿಂದ ವೀಲ್‌ಚೇರ್ ಅನ್ನು ಕೊಡುಗೆಯಾಗಿ ನೀಡಿ ಮಾತನಾಡಿ, ಇನ್ನರ್‌ವ್ಹೀಲ್ ಸಂಸ್ಥೆಯು 100 ವರ್ಷ ಪೂರೈಸಿದ್ದು, ಇಂತಹ ವಿಶೇಷ ಸಂದರ್ಭದಲ್ಲಿ ವಿಶ್ವಾದ್ಯಂತ ಇರುವ ಕ್ಲಬ್‌ಗಳು ವಿಶೇಷ ಯೋಜನೆಗಳನ್ನು ರೂಪಿಸಿಕೊಂಡು ಸೇವಾ ಕಾರ್ಯ ನಡೆಸುತ್ತಿವೆ ಎಂದು ತಿಳಿಸಿದರು.

ಇನ್ನರವ್ಹೀಲ್ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯ ನಡೆಸುತ್ತಿದ್ದು, ಆರ್ಥಿಕ ನೆರವು ಅಗತ್ಯ ಇರುವವರಿಗೆ ನೆರವು ಒದಗಿಸುವ ಸಾರ್ಥಕ ಕೆಲಸ ಮಾಡುತ್ತಿದೆ. ಶಿವಮೊಗ್ಗ ಕ್ಲಬ್ ವತಿಯಿಂದ ಶತಮಾನೋತ್ಸವ ಪ್ರಯುಕ್ತ ಈಗಾಗಲೇ ಅನೇಕ ಸೇವಾಕಾರ್ಯಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ನಾವು ಮಾಡುವ ಸೇವೆಯು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಇನ್ನರ್‌ವ್ಹೀಲ್ ಸಂಸ್ಥೆಯು ಉತ್ತಮ ಕಾರ್ಯಗಳನ್ನು ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವಾ ಕಾರ್ಯಗಳನ್ನು ನಡೆಸುವಂತಾಗಲಿ ಎಂದು ಆಶಿಸಿದರು.

Inner Wheel Shivamogga ಇನ್ನರ್‌ವ್ಹೀಲ್ ಜಿಲ್ಲಾ ಕಾರ್ಯದರ್ಶಿ ಶಬರಿ ಕಡಿದಾಳ್ ಮಾತನಾಡಿ, ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಅಶಕ್ತರಿಗೆ ನೆರವು ಒದಗಿಸುವ ಆಶಯದಿಂದ ಸಂಸ್ಥೆಯು ಕೆಲಸ ಮಾಡುತ್ತಿದ್ದು, ಸಾವಿರಾರು ಜನರಿಗೆ ಸೇವೆ ಸಲ್ಲಿಸಿದೆ ಎಂದು ತಿಳಿಸಿದರು.

ಇನ್ನರ್‌ವ್ಹೀಲ್ ಮಾಜಿ ಚೇರ‍್ಮನ್ ಬಿಂದು ವಿಜಯಕುಮಾರ್, ವಿಜಯ ರಾಯ್ಕರ್, ಮಧು, ವಿನೋದ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...