Mallikarjun Kharge ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಅಧ್ಯಕ್ಷರಾಗಿ ನೇಮಕ ಮಾಡಲು ಒಮ್ಮತ ಮೂಡಿದೆ. ಆದರೆ, ಇಂಡಿಯಾ ಬಣ ಈ ಕುರಿತು ಇನ್ನೂ ಅಧಿಕೃತವಾದ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.
ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನ ಮೈತ್ರಿ ಕೂಟದ ಸಂಚಾಲಕರಾಗಿ ನೇಮಕ ಮಾಡುವ ಪ್ರಸ್ತಾವಕ್ಕೆ ತೃಣ ಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆಯದೆ ಇರುವುದು ಅಧಿಕೃತ ಘೋಷಣೆ ವಿಳಂಬವಾಗಲು ಕಾರಣ ಎನ್ನಲಾಗಿದೆ.
ಮುಂದೆ ಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚಿಸಲು ಇಂಡಿಯಾ ಮೈತ್ರಿಕೂಟದಲ್ಲಿರುವ ಸುಮಾರು ಹತ್ತು ಪಕ್ಷಗಳ ಉನ್ನತ ನಾಯಕರು ನಡೆಸಿದ ವರ್ಚುವಲ್ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ ಮೂಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಅಧ್ಯಕ್ಷರಾಗಿ ನೇಮಕ ಮಾಡಲು ಒಮ್ಮತ ಮೂಡಿದೆ. ಆದರೆ, ಇಂಡಿಯಾ ಬಣ ಈ ಕುರಿತು ಇನ್ನೂ ಅಧಿಕೃತವಾದ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.
ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನ ಮೈತ್ರಿ ಕೂಟದ ಸಂಚಾಲಕರಾಗಿ ನೇಮಕ ಮಾಡುವ ಪ್ರಸ್ತಾವಕ್ಕೆ ತೃಣ ಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆಯದೆ ಇರುವುದು ಅಧಿಕೃತ ಘೋಷಣೆ ವಿಳಂಬವಾಗಲು ಕಾರಣ ಎನ್ನಲಾಗಿದೆ.
Mallikarjun Kharge ಮುಂದೆ ಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚಿಸಲು ಇಂಡಿಯಾ ಮೈತ್ರಿಕೂಟದಲ್ಲಿರುವ ಸುಮಾರು ಹತ್ತು ಪಕ್ಷಗಳ ಉನ್ನತ ನಾಯಕರು ನಡೆಸಿದ ವರ್ಚುವಲ್ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ ಮೂಡಿದೆ.