Monday, May 4, 2026
Monday, May 4, 2026

Yuva Nidhi ಯುವನಿಧಿ ಬಗ್ಗೆ ದೇವೇಗೌಡರ ಟೀಕೆಗೆ ಸಿದ್ಧರಾಮಯ್ಯ ಉತ್ತರ

Date:

Yuva Nidhi ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ತಿಳಿಸಿದ್ದಾರೆ.

ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ
ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ಹೇಳಿದ್ದಾರೆ.

Yuva Nidhi ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದರ? ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...