Thursday, March 19, 2026
Thursday, March 19, 2026

Allama Prabhu ಅಲ್ಲಮಪ್ರಭುಗಳ ಜನ್ಮಭೂಮಿಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ- ಸಚಿವ ಮಧು ಬಂಗಾರಪ್ಪ

Date:

Allama Prabhu ಅನುಭವ ಮಂಟಪದ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುಗಳ ಜನ್ಮಭೂಮಿಯ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.
ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿ(ಅಲ್ಲಮಪ್ರಭುಗಳ ಜನ್ಮಭೂಮಿ)ಹಾಗೂ ಅನಿಮಿಷಾರಣ್ಯರ ಮಾಳಗೊಂಡನಕೊಪ್ಪದ ತಪೋಭೂಮಿಗೆ ಭೇಟಿ ನೀಡಿ ಮಾತನಾಡುತ್ತಿದ್ದರು.

ಹನ್ನೆರಡನೇ ಶತಮಾನದ ಪ್ರಸಿದ್ಧ ಶರಣ ಅಲ್ಲಮಪ್ರಭುಗಳು ಅದ್ವಿತೀಯ ಸಾಧಕರು. ಅವರ ಜೀವನ ಸಂದೇಶಗಳು ಇಂದಿನ ಜನರಿಗೆ ತಲುಪಿಸುವ ಸದುದ್ದೇಶದಿಂದ ಹಾಗೂ ನಮ್ಮ ಕೋರಿಕೆಯಂತೆ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭುಗಳ ಹೆಸರನ್ನು ನಾಮಕರಣ ಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆಂದು ಅವರು ನುಡಿದರು.

ವಿಶೇಷವಾಗಿ ಶಿವಮೊಗ್ಗ ಜಿಲ್ಲೆ 12ನೇ ಶತಮಾನದಲ್ಲಿ ಶರಣರ ನೆಲೆವೀಡಾಗಿಯೇ ಪ್ರಸಿದ್ದವಾಗಿತ್ತು. ಅಂತಹ ಮಹಾತ್ಮರ ಪುಣ್ಯಭೂಮಿಯನ್ನು ಗುರುತಿಸಿ ಅಭಿವೃದ್ಧಿಪಡಿಸದಿರುವುದು ನೋವಿನ ಸಂಗತಿ. ಪ್ರಸ್ತುತ ಆಡಳಿತಾರೂಡ ಸರ್ಕಾರ ಈ ಕ್ಷೇತ್ರದ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

Allama Prabhu ಈ ಕ್ಷೇತ್ರದ ವಿಕಾಸಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರ್ಕಾರದ ಆದೇಶವನ್ನು ನಿರೀಕ್ಷಿಸಲಾಗುತ್ತಿದೆ. ಶರಣರಇಲ್ಲಿನ ಭೂಮಿಯ ಮಾಲಿಕತ್ವದ ಬಗ್ಗೆ ದಾಖಲಾತಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ ಅಲ್ಲದೇ ಈ ಸಂಬಂಧ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಯಿಂದ ಮಾಹಿತಿ ಪಡೆದುಕೊಳ್ಳಲಾಗುವುದು. ಈ ಪ್ರದೇಶದ ಅಭಿವೃದ್ಧಿ ನನ್ನ ಕರ್ತವ್ಯ ಎಂದು ಭಾವಿಸಿರುವುದಾಗಿ ತಿಳಿಸಿದ ಅವರು ಈ ಸಂದರ್ಭದಲ್ಲಿ ಎಲ್ಲರ ಸಹಕಾರವನ್ನು ನಿರೀಕ್ಷಿಸುವುದಾಗಿ ತಿಳಿಸಿದರು. ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜಗೌಡ, ಗೋಣಿ ಮಾಲತೇಶ ಶ್ರೀಕಾಂತ್, ಕಲಗೋಡು ರತ್ನಾಕರ್, ಹುಲ್ಮಾರ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...