Sunday, August 2, 2026
Sunday, August 2, 2026

Siddaramaiah ಕೇಂದ್ರದಿಂದ ಬರ ಪರಿಹಾರ ಬಂದ ನಂತರ ನಿಯಮಾವಳಿ ಪ್ರಕಾರ ಬರ ಪರಿಹಾರ ವಿತರಣೆ- ಸಿದ್ಧರಾಮಯ್ಯ

Date:

Siddaramaiah ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು.
ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ.
ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ. ಎರಡನ್ನೂ ಮಾಡಿದ್ದೇವೆ ಎಂದು ಹೇಳಿದ್ದಾರೆ.

Siddaramaiah ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು.
ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು.
ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...