Wednesday, September 16, 2026
Wednesday, September 16, 2026

DVS College of Arts and Science ರಸ್ತೆ ಸುರಕ್ಷತಾ ನಿಯಮಗಳನ್ನ ಪಾಲಿಸುವುದು ನಮ್ಮ ಜವಾಬ್ದಾರಿ-ಎಸ್. ರಾಜಶೇಖರ್

Date:

DVS College of Arts and Science

ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಮಾಡದಿರುವುದು ಅಪಘಾತ ಸಂಖ್ಯೆ ಹೆಚ್ಚಲು ಪ್ರಮುಖ ಕಾರಣ. ಪ್ರತಿಯೊಬ್ಬ ವಾಹನ ಬಳಕೆದಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸುಬ್ಬಯ್ಯ ದಂತ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಅಘಾತ ಜಾಗೃತಿ ಅಭಿಯಾನ” ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಹನ ಚಾಲನಾ ಪರವಾನಗಿ ಹೊಂದುವುದು ಮೊದಲ ಕರ್ತವ್ಯ. ಬೈಕ್ ಓಡಿಸುವಾಗ ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಬೇಕು. ನಿಯಮಾನುಸಾರ ವೇಗದಲ್ಲಿ ವಾಹನ ಓಡಿಸಬೇಕು. ಎಲ್ಲ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಮಕ್ಕಳು ಜವಾಬ್ದಾರಿಯುತವಾಗಿ ಜೀವನ ನಡೆಸಬೇಕು ಎನ್ನುವುದು ಪಾಲಕರ ಕನಸು. ಆದರೆ ಯುವಜನರು ನಿರ್ಲಕ್ಷ್ಯ ವಹಿಸಿ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಜೀವವನ್ನೇ ಕಳೆದುಕೊಳ್ಳುತ್ತಾರೆ. ಇದರಿಂದ ಪಾಲಕರು ತುಂಬಾ ನೋವು ಅನುಭವಿಸುತ್ತಾರೆ. ಯುವಜನರು ಜಾಗೃತಿ ವಹಿಸಿ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.
ಸುಬ್ಬಯ್ಯ ದಂತ ವಿಜ್ಞಾನಗಳ ಸಂಸ್ಥೆಯ ವೈದ್ಯ ಡಾ. ಪ್ರಮೋದಕೃಷ್ಣ.ಬಿ ಅವರು ರಸ್ತೆ ಅಪಾಘತ ಮತ್ತು ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಸ್ವಾಗತ ಭಾಷಣ ಮಾಡಿದರು.
DVS College of Arts and Science ದೇಶಿಯ ವಿದ್ಯಾಶಾಲಾ ಸಮಿತಿಯ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಕೇತನಾ ಆರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರುದ್ರೇಶ್.ಸಿ.ಇ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...