Sri Guru Siddarameshwar Jayanti ಶಿವಮೊಗ್ಗ ನಗರದ ಕುವೆಂಪು ರಂಗಮoದಿರದಲ್ಲಿ ಭೋವಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ‘ಶ್ರೀ ಗುರು ಸಿದ್ದರಾಮೇಶ್ವರರ ಜಯಂತಿ’ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದ್ದು, ಇದಕ್ಕೆ ಕಾರಣರಾದವರಿಗೆಲ್ಲ ತಾಲ್ಲೂಕು ಭೋವಿ ಸಮಾಜದ ಅಧ್ಯಕ್ಷ ಬಿ. ಜಗದೀಶ್ ಹಾಗೂ ಪ್ರಧಾನ ಕಾರ್ಯದರ್ಶಿ ಗಿರೀಶ್ ಬುಕ್ಲಾಪುರ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೆoದಿಗಿoತ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲಾ ಭೋವಿ ಸಮಾಜ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ಸಮಾಜದ ಹಲವು ಮುಖಂಡರು, ಯುವಕರು, ಸಹೋದರಿಯರು ನಿರಂತರ ಶ್ರಮಿಸಿದ್ದು, ಅವರೆಲ್ಲರಿಗೂ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
Sri Guru Siddarameshwar Jayanti ಹಾಗೆಯೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಜಿಲ್ಲಾಡಳಿತದ ಸಹಕಾರವನ್ನು ಸ್ಮರಿಸಿ, ಅವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಸಮಾಜದ ಯುವಕರು, ಮಹಿಳೆಯರು ಇದೇ ರೀತಿ ಇನ್ನು ಮುಂದೆಯೂ ಸಮಾಜದ ಕೆಲಸಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜದ ಸಂಘಟನೆಯನ್ನು ಬಲಪಡಿಸುವಂತೆ ಅವರು ಇದೇ ಸಂದರ್ಭದಲ್ಲಿ ಕೋರಿದ್ದಾರೆ.