Friday, June 26, 2026
Friday, June 26, 2026

Department of Empowerment of Persons with Disabilities and Senior Citizens ವಿಕಲಚೇತನರಿಗೆ ವಿವಿಧ ಯೋಜನೆ ಪ್ರಯೋಜನೆ ಪಡೆಯಲು ಅರ್ಜಿ ಆಹ್ವಾನ

Date:

Department of Empowerment of Persons with Disabilities and Senior Citizens 2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ 05 ಫಲಾನುಭವಿ ಆಧಾರಿತ ಯೋಜನೆಗಳಡಿ ಸೇವಾಸಿಂಧು ತಂತ್ರಾಂಶದಡಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬೈಲ್‍ಕಿಟ್ ಯೋಜನೆ, ಸಾಧನ ಸಲಕರಣೆಗಳ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗದೆ.

ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್ https://sevasidhu.karnataka.gov.in/Sevasindhu/kannada ನಲ್ಲಿ ಯೋಜನೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಜ.30 ಕಡೆಯ ದಿನವಾಗಿರುತ್ತದೆ.

Department of Empowerment of Persons with Disabilities and Senior Citizens ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಯನ್ನು ದಾಖಲಾತಿಗಳೊಂದಿಗೆ ಲಗತ್ತಿಸಿ ಆಯಾ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್‍ಡಬ್ಲ್ಯು) ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್ ಡಬ್ಲ್ಯು) ಗಳಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಎಂಆರ್‍ಡಬ್ಲ್ಯು ಗಳ ದೂ.ಸಂ: ಶಿವಮೊಗ್ಗ 9980150110, ಭದ್ರಾವತಿ 7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247757, ಸೊರಬ-9110493122, ಹೊಸನಗರ-9731922693 ಹಾಗೂ ಕಚೇರಿ ದೂ.ಸಂ 08182-295234, 251676 ಮತ್ತು ವಿಳಾಸಕ್ಕೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...