Sunday, September 27, 2026
Sunday, September 27, 2026

Physically challenge People ದೈಹಿಕ ವಿಕಲಚೇತನರಿಗೆ ವೀಲ್ ಚೇರ್ ವಿತರಿಸಲು ಅರ್ಜಿಗೆ ಆಹ್ವಾನ

Date:

Physically challenge People 2023-24 ನೇ ಸಾಲಿಗೆ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಿಗೆ ಬ್ಯಾಟರಿಚಾಲಿತ ವ್ಹೀಲ್ ಚೇರ್‍ಗನ್ನು ನೀಡಲಾಗುವುದು. ಅರ್ಜಿದಾರರು ವಾಸಸ್ಥಳ ದೃಢೀಕರಣ, ವಿಕಲತೆಯ ಪ್ರಮಾಣಪತ್ರ(ಯುಡಿಐಡಿ ಕಾರ್ಡ್), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಗುರುತಿನ ಚೀಟಿ ಇವುಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಪ್ರತಿ ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್‍ಡಬ್ಲ್ಯು) ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲಾತಿಗಳನ್ನು ಫೆ.23 ರೊಳಗೆ ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳು ಇವರಿಗೆ ಸಲ್ಲಿಸಬಹುದು.

Physically challenge People ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಭಾರತ ಸಂಚಾರ ನಿಗಮದ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ದೂ.ಸಂ: 08182-250676, 251676 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...