Sunday, August 2, 2026
Sunday, August 2, 2026

VISL Workers Union ಸರ್ ಎಂ.ವಿ. ಪುತ್ಥಳಿಗೆ ಮಾಲಾರ್ಪಣೆ ಮೂಲಕ ವಿಐಎಸ್ಎಲ್ ಸಂಸ್ಥಾಪಕರ ದಿನಾಚರಣೆ

Date:

VISL Workers Union ವಿಐಎಸ್ ಎಲ್ ನಲ್ಲಿ 106ನೇ ಸ್ಥಾಪನೆಯ ವರ್ಷದ ಅಂಗವಾಗಿ ಅತ್ಯುತ್ತಮ ಇಂಜೀನಿಯರ್, ರಾಜನೀತಿಜ್ಞ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ದಿನಾಂಕ 18-01-2024ರಂದು ಮಾಲಾರ್ಪಣೆ ಮಾಡುವ ಮೂಲಕ ವಿ.ಐ.ಎಸ್.ಎಲ್‌ನ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.

ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಎಮ್.ಎಲ್. ಯೋಗೀಶ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪ್ರಭಾರಿ ಅಧ್ಯಕ್ಷರು, ವಿಐಎಸ್ ಎಲ್ ಕಾರ್ಮಿಕರ ಸಂಘ, ಶ್ರೀ ಪಾರ್ಥಸಾರಥಿ ಮಿಶ್ರ, ಅಧ್ಯಕ್ಷರು, ವಿಐಎಸ್ ಎಲ್ ಅಧಿಕಾರಿಗಳ ಸಂಘ, ಶ್ರೀಮತಿ ಕೆ.ಎಸ್.ಶೋಭ, ಉಪಪ್ರಬಂಧಕರು (ಸಿಬ್ಬಂದಿ) ಇವರುಗಳು ವಿಐಎಸ್ ಎಲ್ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

VISL Workers Union ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥಾಪಕರಾದ ಸರ್. ಎಮ್. ವಿಶ್ವೇಶ್ವರಾಯರವರಿಗೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪೋಟೋ ಶೀರ್ಷಿಕೆ:
ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಸರ್. ಎಮ್. ವಿಶ್ವೇಶ್ವರಾಯರವರಿಗೆ ನಮನ ಸಲ್ಲಿಸುತ್ತಿರುವುದು.
ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರೊಂದಿಗೆ ಇತರ ಗಣ್ಯರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...