Thursday, June 18, 2026
Thursday, June 18, 2026

Daivajna Credit Friendly Cooperative Society ಚಿಕ್ಕಮಗಳೂರು ದೈವಜ್ಞ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಲಿನಿ ,ಎ. ರಾಯ್ಕರ್ ಆಯ್ಕೆ

Date:

Daivajna Credit Friendly Cooperative Society ದೈವಜ್ಞ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಾಲಿನಿ.ಎ.ರಾಯ್ಕರ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಕೆ.ಸುರೇಶ್ ಅವಿರೋಧಯಾಗಿ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರಿನ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶಾಲಿನಿ ಮತ್ತು ಸುರೇಶ್ ಹೊರತು ಪಡಿಸಿ ಬರ‍್ಯಾವ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಕೆ.ಸಿ.ವಸಂತ ಶುಕ್ರವಾರ ಸಂಜೆ ಅವಿರೋಧ ಆಯ್ಕೆಯನ್ನು ಘೋಷಿಸಿದರು.

Daivajna Credit Friendly Cooperative Society ಬಳಿಕ ಮಾತನಾಡಿದ ಅಧ್ಯಕ್ಷೆ ಶಾಲಿನಿ.ಎ. ರಾಯ್ಕರ್ ಮುಂಬರುವ ದಿನಗಳಲ್ಲಿ ಸಂಘವು ರಜತ ಮಹೋ ತ್ಸವವನ್ನು ಆಚರಿಸುವ ಹಿನ್ನೆಲೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಸಹಕಾರ ಪಡೆದುಕೊಂಡು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಲು ಮುಂದಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸಿ.ಆರ್.ಸುಧೀರ್‌ಕುಮಾರ್, ಕೆ.ವಿ.ಮಹೇಂದ್ರ, ಕೆ.ವಿ.ಆನಂದ್, ಸಿ.ಎಲ್.ಶ್ರೀಕಾಂತ್, ಬಿ.ಜಿ.ಪ್ರಕಾಶ್, ಕೀರ್ತಿ ಸಿ.ಎಂ.ಶೆಟ್, ಯು.ಎಲ್.ಶ್ರೀಧರ್, ತಾರಾಮತಿ ಆರ್.ಶೇಟ್, ದೀಪಾ ಪ್ರಕಾಶ್, ವಿ.ರಮೇಶ್, ಸಲಹೆಗಾರರಾದ ಅಶೋಕ್ ರಾಯ್ಕರ್, ರಮೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...