Wednesday, October 2, 2024
Wednesday, October 2, 2024

Prasar Bharati ಶಿವಮೊಗ್ಗದಲ್ಲಿ 10 ಕಿಲೋವ್ಯಾಟ್ ಎಫ್. ಎಂ‌.ಕೇಂದ್ರಕ್ಕೆ ಪ್ರಧಾನಿಗಳಿಂದ ವರ್ಚುವಲ್ ಮೂಲಕ ಶಿಲಾನ್ಯಾಸ

Date:

Prasar Bharati ಪ್ರಸಾರ ಭಾರತಿ ವತಿಯಿಂದ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೋ ವ್ಯಾಟ್ ಎಫ್.ಎಂ ಪ್ರಸರಣ ಕೇಂದ್ರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ನಗರದ ಜನತೆಯ ಬಹುದಿನದ ಬೇಡಿಕೆ ಆಗಿದ್ದ ಎಫ್.ಎಂ ಕೇಂದ್ರ 10 ವ್ಯಾಟ್ ನ ಎಫ್.ಎಂ ಕೇಂದ್ರವಾಗಿ ವಿಸ್ತರಣೆ ಹೊಂದಿದೆ.
1 ಕಿಲೋ ವ್ಯಾಟ್ ಇದ್ದ ಶಿವಮೊಗ್ಗ ಭದ್ರಾವತಿ ಕೇಂದ್ರಕ್ಕೆ 10 ಕಿಲೋ ವ್ಯಾಟ್ ಸಿಕ್ಕಿರುವುದು ಮಲೆನಾಡಿಗೆ ಸಿಕ್ಕ ಗೌರವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಸ್ತುತ ಶಿವಮೊಗ್ಗ ಮತ್ತು ಭದ್ರಾವತಿ ವ್ಯಾಪ್ತಿಯಲ್ಲಿ ಆಕಾಶವಾಣಿ ಮತ್ತು ಎಫ್.ಎಂ ರೇಡಿಯೋ ಸುಮಾರು 1 ಕೆವಿ ಸಾಮಥ್ರ್ಯ ಟ್ರಾನ್ಸ್‍ಮಿಟರ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಉನ್ನತೀಕರಣದ ನಂತರ ಇದರ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ,ಉತ್ತರ ಕನ್ನಡ, ಉಡುಪಿ ಸೇರಿದಂತೆ ಅಕ್ಕಪಕ್ಕದ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ.

ಇದರ ಪೂರ್ಣಪ್ರಮಾಣದ ಕಾರ್ಯಾರಂಭವಾದ ಮೇಲೆ ನಾವು ಕಾರ್‍ನಲ್ಲ್ಲಿ ಪ್ರಯಾಣ ಮಾಡುವಾಗ ಶಿವಮೊಗ್ಗದ ಯಾವುದೇ ಮೂಲೆಗೆ ಸಮಾರು 150 ಕಿಲೋ ಮೀಟರವರೆಗೆ ರೇಡಿಯೋ ಕೇಳಿಕೊಂಡು ಹೋಗಬಹುದು.

ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅತ್ಯಧಿಕ ಸಾಮರ್ಥ್ಯದ ಟ್ರಾನ್ಸ್‍ಮಿಟರ್ ಅಳವಡಿಕೆ ಕಾರ್ಯ ನಮ್ಮ ಶಿವಮೊಗ್ಗದಲ್ಲಿ ಆಗುತ್ತಿರುವುದು ನಮಗೆಲ್ಲ ಹೆಮ್ಮೆ ಹಾಗೂ ಸಂತೋಷ ತರುವ ವಿಚಾರವಾಗಿದೆ ಎಂದರು.

ಆಕಾಶವಾಣಿಗೆ 59 ವರ್ಷ ತುಂಬಿದ್ದು ಇಳಿ ವಯಸ್ಸಿನಲ್ಲಿ ಯೌವನ ಬಂದಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿ ನಾಯಕತ್ವವು ನಮ್ಮ ಮಲೆನಾಡಿನ ಅಭಿವೃದ್ಧಿಗೆ ಸಹಕಾರಿಯಾಗಿದೆ.

Prasar Bharati ಈ ಯೋಜನೆಗೆ ರೂ. 10 ಕೋಟಿ ಅನುದಾನ ನೀಡಲಾಗಿದ್ದು ಅನುಷ್ಟಾನ ನಂತರ ತುಮಕೂರುವರೆಗೂ ರೆಡಿಯೋ ಸೇವೆ ದೊರೆಯಲಿದೆ. ಮೋಬೈಲ್ ನಲ್ಲೂ ಇಂಟರ್ನೆಟ್ ಇಲ್ಲದೆ ಬಳಸಬಹುದು. ನಮ್ಮ ಮಲೆನಾಡಿನ ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಹ ಸಹಕಾರಿ ಆಗಲಿದ್ದು ಮುಂದಿನ ದಿನಗಳಲ್ಲಿ ಭಾರತದಲ್ಲಿ ಅತೀ ದೊಡ್ಡ ಎಫ್ ಎಂ ಕೇಂದ್ರ ಆಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭದ್ರಾವತಿ ಆಕಾಶವಾಣಿ ಸ್ಟುಡಿಯೋವನ್ನು ಮೇಲ್ದರ್ಜೆಗೇರಿಸಲಾಗುವುದು. ಈ ರೀತಿಯ ಯೋಜನೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರದ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು ಮಾತನಾಡಿ, ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳು ಈ ದೇಶದಲ್ಲಿ ಅಧಿಕಾರ ವಹಿಸಿಕೊಂಡ ನಂತರ ದೇಶದ ಅಭಿವೃದ್ಧಿ ಚಿಂತನೆಯೊಂದಿಗೆ ಈ ರೀತಿಯ ಅನೇಕ ಯೋಜನೆಯನ್ನು ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ.

ಭದ್ರಾವತಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್ ಆರ್ ಭಟ್ ಅವರು ಮಾತನಾಡಿ ನಮ್ಮ ಆಕಾಶವಾಣಿಗೆ ಹೊಸ ಹುರುಪು ಬರುತ್ತಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರ ಶ್ರಮ ಅತ್ಯಂತ ಅಮೂಲ್ಯವಾದದ್ದು ಎಂದು ಶ್ಲಾಘಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಅರುಣ್ ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷರಾದ ಜಗದೀಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...