Thursday, August 13, 2026
Thursday, August 13, 2026

Student Suicide ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ವುತ್ತಿದೆ ದಸಂಸ ದಿಂದ ಆತಂಕ

Date:

student Suicide ರಾಜ್ಯದಲ್ಲಿ ದಿನೇ ದಿನೇ ವಿದ್ಯಾರ್ಥಿಗಳು ನೇಣಿಗೆ ಶರಣಾಗುತ್ತಿರುವ ಹಿನ್ನೆಲೆ ಯಲ್ಲಿ ನೈತಿಕ ಹೊಣೆಹೊತ್ತ ಶಿಕ್ಷಣ ಸಚಿವರು ರಾಜೀನಾಮೆ ಸಲ್ಲಿಸಿ, ಮಕ್ಕಳ ಸಾವಿನ ಹಿಂದಿನ ರಹಸ್ಯವನ್ನು ಸಮಗ್ರ ತನಿಖೆ ನಡೆಸಬೇಕು ಎಂದು ದಸಂಸ (ಪ್ರೋ.ಕೃಷ್ಣಪ್ಪ ಸ್ಥಾಪಿತ) ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿ ಬಿಳಕೊಪ್ಪದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ದುರ್ದೈವದ ಸಂಗತಿ. ಇಂ ತಹ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚಾಗುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಚಿಕ್ಕಮಗಳೂರು, ವಿಜಯಪುರ ಸೇರಿದಂತೆ ಇದೀಗ ಶಿವಮೊಗ್ಗದಲ್ಲೂ ವಿದ್ಯಾರ್ಥಿಯ ಸಾವಿನ ಹಿಂದಿನ ರಹಸ್ಯ ಬಗೆಹರಿದಿಲ್ಲ. ಅದಲ್ಲದೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲೆಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದ್ದಾರೆ.

student Suicide ಹೀಗಾಗಿ, ವಿದ್ಯಾರ್ಥಿಗಳ ಸಾವಿನ ಸಮಗ್ರ ತನಿಖೆಯನ್ನು ನಡೆಸಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಬೇಕು ಹಾಗೂ ಶಿಕ್ಷಣ ಸಚಿವರ ರಾಜೀನಾಮೆ ಪಡೆದುಕೊಂಡು ಸರ್ಕಾರವೇ ನೇರವಾಗಿ ತನಿಖೆ ನಡೆಸುವ ಮುಖಾಂತರ ಮುಂದಿನ ದಿನಗಳಲ್ಲಿ ಈ ಅಚಾತುರ್ಯ ನಡೆಯದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...