Thursday, March 19, 2026
Thursday, March 19, 2026

Death News ಪತಿಯಿಂದಲೇ‌ ಪತ್ನಿಯ ಬರ್ಬರ ಹತ್ಯೆ

Date:

Death News ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಫಟನೆ ಶನಿವಾರ ನಡೆದಿದೆ.

ಅವಿಗೆಯ ಕುಣಬಿ ಸಮುದಾಯಕ್ಕೆ ಸೇರಿದ ಲೋಕೇಶ (40) ಎಂಬಾತ ಕೌಟುಂಬಿಕ ಕಲಹದ ನಡುವೆ ಏಕಾಏಕಿ ಪತ್ನಿ ನೀಲಾವತಿ(38) ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಕುತ್ತಿಗೆ ಭಾಗದಲ್ಲಿ ಬಲವಾಗಿ ಹಲ್ಲೆ ಮಾಡಿದ್ದರಿಂದ ತೀವ್ರ ರಕ್ತ ಸ್ರಾವ ಉಂಟಾಗಿದೆ.

ಸ್ಥಳೀಯರು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

Death News ಸದ್ಯ ಕೊಲೆ ನಂತರ ಆರೋಪಿ ಲೋಕೇಶ (40) ತಲೆ ಮರೆಸಿ ಕೊಂಡಿದ್ದು ಆರೋಪಿ ಪತ್ತೆಗಾಗಿ ಪೋಲಿಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಇವರಿಗೆ 3ಜನ ಪುತ್ರಿಯರು ಇದ್ದು, ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ಕಾರ್ಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...