Saturday, November 23, 2024
Saturday, November 23, 2024

Subhas Chandra Bose ಪರಾಕ್ರಮ ದಿನ ಸ್ಮರಣೆ ಯುವಜನರಿಗೆ ಸ್ಫೂರ್ತಿ ಸುಭಾಷ್ ಚಂದ್ರ ಬೋಸ್

Date:

Subhas Chandra Bose ಭಾರತ ದೇಶ ಕಂಡ ಅಪ್ರತಿಮ ದೇಶಭಕ್ತ, ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಈ ಮಹಾನ್ ರಾಷ್ಟ್ರ ನಾಯಕನ ಜೀವನದ ಘಟನೆಗಳ ಮೆಲುಕೇ ಸ್ಪೂರ್ತಿಯುತವಾದುದು.

ಇಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನ. ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಇಂದು ದೇಶಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ನೇತಾಜಿ ಅವರು 1897 ಜನವರಿ 23 ರಂದು ಒಡಿಶಾದಲ್ಲಿ ಜನಿಸಿದರು.

ನನಗೆ ನಿಮ್ಮ ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ” ಸ್ವಾತಂತ್ರ್ಯ ಪೂರ್ವದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಈ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಸೇರಲು ಅನೇಕ ಭಾರತೀಯರ ಹೃದಯದಲ್ಲಿ ದೇಶಭಕ್ತಿಯನ್ನು ಹುಟ್ಟುಹಾಕಿತು. ಸುಭಾಷ್ ಚಂದ್ರ ಬೋಸ್ ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರು ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಲು ಬಹಳ ಶ್ರಮಿಸಿದರು.

ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭಾರತ ಮಾತೆಯ ಈ ಧೀರನ ಜನುಮ ದಿನ ಇಂದು. ಸದಾ ಕ್ರಿಯಾಶಿಲರಾಗಿದ್ದ ದೇಶಕ್ಕಾಗಿ ತಮ್ಮ ಬದುಕನ್ನೇ ಮುಡುಪಿಟ್ಟ ಆ ಮಹಾನ್ ಚೇತನವನ್ನು ನಾವೆಲ್ಲ ಒಂದಾಗಿ ಸ್ಮರಣೆ ಮಾಡಬೇಕಾದ ದಿವಸವಿಂದು.

Subhas Chandra Bose ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ನಾವೇ ಪಡೆದುಕೊಳ್ಳಬೇಕು ಅವರ ಸಂದೇಶಗಳಲ್ಲಿ ಒಂದಾಗಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸಿರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆ ಯನ್ನು ಸ್ಥಾಪಿಸಿದರು. ಇವರು ಟೈವಾನ್ ನಲ್ಲಿ 1945 ಆಗಸ್ಟ್ 18 ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಹೇಳಲಾಗುತ್ತಿದ್ದು, ಈ ಘಟನೆ ವಿವಾದಿತವಾಗಿಯೇ ಉಳಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...