Narendra Modi ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿರಾಜಮಾನನಾಗಿರುವ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ಸಂಕಲ್ಪದೊಂದಿಗೆ ಅಯೋಧ್ಯೆಯಿಂದ ಹಿಂತಿರುಗಿದ ಬಳಿಕ ಪ್ರಧಾನಿ ಶ್ರೀ. ನರೇಂದ್ರ ಮೋದಿ
ಅವರು ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಿಸಿದ್ದಾರೆ.
Narendra Modi ಯೋಜನೆಯಡಿ 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವು ಸ್ವಾವಲಂಭಿಯಾಗಲಿದೆ.