Friday, April 18, 2025
Friday, April 18, 2025

Blood Group Check ಪ್ರತಿಯೊಬ್ಬರೂ ತಮ್ಮ ರಕ್ತದ ಗುಂಪಿನ ಮಾಹಿತಿ ಅರಿತಿರಬೇಕು- ಡಾ.ಗುಡುದಪ್ಪ ಕಸಬಿ

Date:

Blood Group Check ಪ್ರತಿಯೊಬ್ಬ ವ್ಯಕ್ತಿಯು ವೈಯುಕ್ತಿಕ ದಾಖಲೆ ವಿವರ ಇಟ್ಟುಕೊಳ್ಳುವಂತೆ ರಕ್ತದ ಗುಂಪಿನ ಮಾಹಿತಿಯ ಬಗ್ಗೆ ಅರಿತಿರಬೇಕು. ತುರ್ತು ಸಂದರ್ಭಗಳಲ್ಲಿ ರಕ್ತದ ಮಾಹಿತಿ ಇದ್ದರೆ ಅಗತ್ಯವಿರುವವರಿಗೆ ದಾನ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪ್ರಯೋಗ ಶಾಲೆ ತಾಂತ್ರಿಕ ಅಧಿಕಾರಿಗಳ ಸಂಘದ ಸಹಕಾರದಲ್ಲಿ ಇಂಟರಾಕ್ಟ್ ಮಕ್ಕಳು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ರಕ್ತದ ಗುಂಪು ತಪಾಸಣೆ ಹಾಗೂ ರಕ್ತದಾನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದ ಗುಂಪುಗಳ ವರ್ಗೀಕರಣ ಮಾಹಿತಿ ಇರುವುದರಿಂದ ಒಬ್ಬರು ಇನ್ನೊಬ್ಬರಿಗೆ ರಕ್ತದಾನ ಮಾಡಲು ಸಹಕಾರಿ ಆಗಿದೆ. ರಕ್ತದಾನ ಮಾಡಲು ಸಹ ರಕ್ತದ ಗುಂಪಿನ ಮಾಹಿತಿ ಅತ್ಯಂತ ಮುಖ್ಯ. ರಕ್ತದಾನ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ತಜ್ಞರಿಂದ ರಕ್ತದ ಮಾಹಿತಿ ಪಡೆದುಕೊಳ್ಳುವುದು ಅವ್ಯಶಕ. ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ತುರ್ತು ಸಂದರ್ಭಗಳಲ್ಲಿ ರಕ್ತದಾನ ಮಾಡುವುದರಿಂದ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ ಎಂದು ತಿಳಿಸಿದರು.

Blood Group Check ಜಿಲ್ಲಾ ಪ್ರಯೋಗಶಾಲೆ ತಾಂತ್ರಿಕ ಅಧಿಕಾರಿಗಳ ಸಂಘದ ಅಧ್ಯಕ್ಷ ಬಸವರಾಜ ಅವರು ರಕ್ತದ ವಿವಿಧ ಗುಂಪು ಹಾಗೂ ರಕ್ತದ ಅವಶ್ಯಕತೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವೆಂಕಟೇಶ್, ಪ್ರಶಾಂತ್, ರಾಜು, ಚನ್ನಪ್ಪ, ಸಹ್ಯಾದ್ರಿ ಪ್ರೌಢಶಾಲೆ ಆಡಳಿತಾಧಿಕಾರಿ ಟಿ.ಪಿ.ನಾಗರಾಜ, ಗುರುಮೂರ್ತಿ, ಮುಖ್ಯ ಶಿಕ್ಷಕಿ ಉಮ್ಮಸಲ್ಮಾ, ಕೆ.ಸಿ.ಅನುಶ್ರೀ, ಶೋಭಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....