Thursday, September 17, 2026
Thursday, September 17, 2026

Republic Day Celebration ಶಿವಮೊಗ್ಗದಲ್ಲಿ ಅದ್ಧೂರಿಯ ಗಣರಾಜ್ಯೋತ್ಸವಕ್ಕೆ ಜಿಲ್ಲಾಡಳಿತ ಸಜ್ಜು

Date:

Republic Day Celebration ಶಿವಮೊಗ್ಗ, ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಿವಮೊಗ್ಗ ಇವರ ವತಿಯಿಂದ ಜ.26 ರ ಬೆಳಗ್ಗೆ 09 ಗಂಟೆಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ 75 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನೆರವೇರಿಸುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರ ಗೌರವ ಉಪಸ್ಥಿತಿ ಇರಲಿದೆ.

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು,, ಜಿ.ಪಂ ಸಿಇಓ, ಮಹಾನಗರ ಪಾಲಿಕೆ ಆಯುಕ್ತರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Republic Day Celebration ಸಂಜೆ 5 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ, ಪೊಲೀಸ್ ಬ್ಯಾಂಡ್ ಮತ್ತು ನಗರದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕoತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...