DVS Arts and Science college ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರು ಮತ್ತುನಗರದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಡಾ. ಎಂ.ವೆಂಕಟೇಶ್ ಅವರು “ಸ್ವಾಮಿ ವಿವೇಕಾನಂದ ರಾಜ್ಯಮಟ್ಟದ ಸದ್ಭಾವನಾ ಪ್ರಶಸ್ತಿ” ಪುರಸ್ಕೃತರಾಗಿದ್ದಾರೆ.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ರಾಜ್ಯಮಟ್ಟದಲ್ಲಿ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ನೀಡಲಾಗುತ್ತದೆ. ಫ್ರಸ್ತಕ ಸಾಲಿನಲ್ಲಿ ಎಲ್ಲ ಜಿಲ್ಲೆಗಳ ಸಾಧಕರನ್ನು ಆಯ್ಕೆ ಮಾಡಿ ಒಟ್ಟು 34 ಸಾಧಕರು ಹಾಗೂ ಎರಡು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯಿಂದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಎಂ.ವೆಂಕಟೇಶ್ ಅವರಿಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟವು ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಡಾ. ಎಂ.ವೆಂಕಟೇಶ್ ಅವರು ಅರ್ಥಶಾಸ್ತ್ರದಲ್ಲಿ ಎಂ.ಎ. ಪದವಿ ಪೂರೈಸಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
1991ರಲ್ಲಿ ಡಿವಿಎಸ್ ಸಂಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿದರು. 2007ರಿಂದ 2009ರವರೆಗೆ ಸಂಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
DVS Arts and Science college ಡಾ ಎಂ.ವೆಂಕಟೇಶ್ ಅವರು ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದ ಅತ್ತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕನ್ನಡ ಜಾನಪದ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮುದ್ದೇಬಿಹಾಳದ ವಿಬಿಸಿ ಪ್ರೌಢಶಾಲೆಯ ಮೈದಾನದಲ್ಲಿ ಜನವರಿ 28ರಂದು ಸ್ವಾಮಿ ವಿವೇಕಾನಂದರ 161ನೇ ಜಯಂತೋತ್ಸವ, ಪ್ರಶಸ್ತಿ ಪ್ರದಾನ, ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಲಿದೆ. ಜನವರಿ 28ರ ಕಾರ್ಯಕ್ರಮದಲ್ಲಿ ಎಲ್ಲ ಸಾಧಕರಿಗೂ ಪ್ರಶಸ್ತಿ ಪ್ರದಾನ ನಡೆಯಲಿದೆ. ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಕಾರ್ಯದರ್ಶಿ ಪ್ರೊ.ಕೆ.ಎಂ .ನಾಗರಾಜ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.