Bharat Scouts and Guides ಇಂದು ಬೆಳಗ್ಗೆ 7.15ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಜಿಲ್ಲಾ ಸ್ಕೌಟ್ ಭವನ ಶಿವಮೊಗ್ಗದಲ್ಲಿ ಆಚರಿಸಲಾಯಿತು.
ವಿವಿಧ ಶಾಲೆ, ಕಾಲೇಜಿನ ಕ್ಲಬ್ ಬ್, ಬುಲ್‌ಬುಲ್, ಸ್ಕೌಟ್ಸ್, ಗೈಡ್ಸ್, ರೋರ‍್ಸ್ ಮತ್ತು ರೇಂರ‍್ಸ್ಗಳು ಭಾಗವಹಿಸಿದ್ದರು. ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ ರಮೇಶ ಶಾಸ್ತ್ರೀಯವರು ಧ್ವಜಾರೋಹಣ ನೆರೆವೇರಿಸಿದರು.
ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ನಂತರದಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾ ಆಯುಕ್ತರು (ಸ್ಕೌ) ಶ್ರೀ ಕೆ.ಪಿ.ಬಿಂದುಕುಮಾರ್‌ರವರು ಸಂವಿಧಾನದ ಪೀಠಿಕೆಯನ್ನು ಓದಿ ತಿಳಿಸಿದರು. ನಂತರ ಜಿಲ್ಲಾ ಮುಖ್ಯ ಆಯುಕ್ತರು, ಶ್ರೀ ಹೆಚ್.ಡಿ.ರಮೇಶ್ ಶಾಸ್ತಿçರವರು ಮಾತನಾಡುತ್ತಾ, ಭಾರತ ಸಂವಿಧಾನವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.
Bharat Scouts and Guides ಭಾರತದ ಪ್ರತಿಯೊಬ್ಬ ಪ್ರಜೆಯು ಸಂವಿಧಾನಕ್ಕೆ ಗೌರವಿಸಬೇಕು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ರವರ ಆದರ್ಶ, ಉದ್ದೇಶ ಮತ್ತು ತತ್ವಗಳನ್ನು ಅರಿತು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಬೇಕು. ಮಕ್ಕಳ ಬೆಳವಣಿಗೆ ಮತ್ತು ವಿಕಾಸಕ್ಕೆ ಸ್ಕೌಟ್ಸ್ ಶಿಕ್ಷಣ ಅವಶ್ಯಕವಾಗಿದೆ, ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಕೌಟ್ಸ್ ಶಿಕ್ಷಣ ಪಡೆಯುವಂತಾಗಲಿ ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾಂಚಿ ಶ್ರೀ ಚೂಡಾಮಣಿ ಈ ಪವಾರ್, ಜಿಲ್ಲಾ ಕಾರ್ಯದರ್ಶಿ ಶ್ರೀ ಹೆಚ್.ಪರಮೇಶ್ವರರವರು ಸಹ ಕಾರ್ಯದರ್ಶಿ ಶ್ರೀ ವೈ.ಆರ್.ವೀರೇಶಪ್ಪ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು (ಗೈ) ಶ್ರೀಮತಿ ಭಾರತಿ ಡಾಯಸ್, ಶ್ರೀ ರಾಜೇಶ್ ಅವಲಕ್ಕಿ, ಮಲ್ಲಿಕಾರ್ಜುನ ಕಾನೂರು, ಚಂದ್ರಶೇಖರಯ್ಯ ನಗರದ ವಿವಿಧ ಶಾಲೆ, ಸ್ಕೌಟ್ಸ್, ಗೈಡ್ಸ್, ಹಾಗೂ ಇತರೆ ಸ್ಕೌರ‍್ಸ್ ಮತ್ತು ಗೈರ‍್ಸ್ಗಳು ಉಪಸ್ಥಿತರಿದ್ದರು.