Saturday, December 6, 2025
Saturday, December 6, 2025

DVS Polytechnic College ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂಮೂಲಹಕ್ಕು & ಕರ್ತವ್ಯಗಳನ್ನು ಒದಗಿಸುತ್ತದೆ- ಎಸ್.ರಾಜಶೇಖರ್

Date:

DVS Polytechnic College ದೇಶದ ಪ್ರತಿಯೊಬ್ಬ ವ್ಯಕ್ತಿಯೂ ತಮಗೆ ದೊರೆತಿರುವ ಜವಬ್ದಾರಿ ಹಾಗೂ ಕರ್ತವ್ಯ ನಿರ್ವಹಿಸುವ ಮೂಲಕ ಸದೃಢ ರಾಷ್ಟ್ರದ ನಿರ್ಮಾಣದಲ್ಲಿ ಪಾತ್ರ ವಹಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಹಾಗೂ ಡಿವಿಎಸ್ ಸಮೂಹ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗಳಿಗೂ ಸಂವಿಧಾನ ಮೂಲ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಡಿವಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯೆ ಪೂರ್ಣಿಮಾ.ಡಿ. ಮಾತನಾಡಿ, ಸಂವಿಧಾನದ ಅಂಗೀಕಾರ ಪ್ರತಿಯು ಲಿಖಿತ ರೂಪದಲ್ಲಿ ದಾಖಲಾಗಿರುವುದು ವಿಶೇಷ. ಸಂವಿಧಾನದ ಪ್ರತಿಯೊಂದು ಪುಟಗಳನ್ನು ಕಲಾವಿದರು ಅಲಂಕಾರಗೊಳಿಸಿದ್ದಾರೆ. ಸಂವಿಧಾನದ ಮೂಲ ಪ್ರತಿ ಸಂಸತ್ ಭವನದ ಗ್ರಂಥಾಲಯದಲ್ಲಿ‌ ಇರಿಸಲಾಗಿದೆ.

ಸಂವಿಧಾನ ಅಂಗೀಕಾರದ ಪ್ರಯುಕ್ತ ಪ್ರತಿ ವರ್ಷ ದೇಶಾದ್ಯಂತ ಜನವರಿ 26 ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಗಣರಾಜ್ಯೋತ್ಸವ ನೆರವೇರಿಸಿ ಸಂದೇಶ ನೀಡಿದರು. ಡಿವಿಎಸ್ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿಕೊಟ್ಟರು. ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣಗಳನ್ನು ಧರಿಸಿ ಗಮನ‌ ಸೆಳೆದರು. ದೇಶಭಕ್ತಿಗೆ ಸಂಬಂಧಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ‌ ನಿವೃತ್ತರಾಗಿರುವ ಸೈನಿಕರಾದ ರಘುನಾಥ್.ಎಸ್., ವಿಜಯಕುಮಾರ್.ಡಿ. ಹಾಗೂ ರಘುಪತಿ.ಎಂ ಅವರನ್ನು ದೇಶಿಯ ವಿದ್ಯಾಶಾಲಾ ಸಮಿತಿ ಹಾಗೂ ಸಮೂಹ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು.

DVS Polytechnic College ದೇಶಿಯ ವಿದ್ಯಾಶಾಲಾ ಸಮಿತಿಯ ಸಹ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್, ಶಿಕ್ಷಕ ಪ್ರತಿನಿಧಿ ಉಮೇಶ್ ಎಚ್.ಸಿ., ಡಿವಿಎಸ್ ‌ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್, ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಲಕ್ಷ್ಮೀದೇವಿ, ಉಪ ಪ್ರಾಚಾರ್ಯ ಶ್ರೀಧರ್.ಸಿ.ಕೆ., ವಿನೋಬನಗರ ಡಿವಿಎಸ್ ಶಾಲೆ ಮುಖ್ಯ ಶಿಕ್ಷಕ ಲಕ್ಷ್ಮಣ.ಪಿ, ಡಿವಿಎಸ್ ಸಂಜೆ ಕಾಲೇಜಿನ ಪ್ರಾಚಾರ್ಯ ಪದ್ಮೇಗೌಡ, ಡಿವಿಎಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಬಸವರಾಜ್, ಸುರೇಶ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...