Friday, December 5, 2025
Friday, December 5, 2025

S N Channabasappa ಮಕ್ಕಳಿಗೆ ಶಿಕ್ಷಣದ ಜೊತೆ ಜೀವನದ ಮೌಲ್ಯಗಳು ಅತ್ಯಂತ ಅವಶ್ಯಕ – ಎಸ್.ಎನ್ ಚೆನ್ನಬಸಪ್ಪ

Date:

S N Channabasappa ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಜೀವನದ ಮೌಲ್ಯಗಳು ಹಾಗೂ ಸಂಸ್ಕಾರ ಕುರಿತು ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅವಶ್ಯಕವಾಗಿರುತ್ತದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ನಗರದ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಆಯೋಜಿಸಿದ್ದ ದೈಹಿಕ ಕವಾಯತು ಪ್ರದರ್ಶನ, ಬ್ಯಾಂಡ್ ಪ್ರದರ್ಶನ ಹಾಗೂ ರಿಟ್ರೀಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸ್ಕೌಟ್ ಮತ್ತು ಗೈಡ್‌ನಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವಿಶೇಷ ಕೌಶಲ್ಯ ಹಾಗೂ ನಾಯಕತ್ವ ಗುಣ ಬೆಳೆಯುತ್ತದೆ. ಸೇವಾ ಮನೋಭಾವನೆ ವೃದ್ಧಿಸುವ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಉತ್ತಮ ಸಾಧನೆ ಮಾಡಲು ನೆರವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆಯುಕ್ತ ಸ್ಕೌಟ್ ಕೆ.ಪಿ.ಬಿಂದುಕುಮಾರ್ ಮಾತನಾಡಿ, ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಗೆ ನೂರಾರು ವರ್ಷದ ಇತಿಹಾಸ ಇದ್ದು, ಸ್ಕೌಟ್‌ನಲ್ಲಿ ತೊಡಗಿಸಿಕೊಂಡಿದ್ದ ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಉನ್ನತ ಸಾಧನೆ ಮಾಡಿ ವಿಶ್ವಾದ್ಯಂತ ವೃತ್ತಿ ಜೀವನದಲ್ಲಿ ಯಶಸ್ವಿ ಜೀವನ ನಡೆಸಿದ್ದಾರೆ ಎಂದು ಹೇಳಿದರು.

ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಸ್ಕೌಟ್ ಗೈಡ್‌ನ ಮಕ್ಕಳ ಮನಸ್ಸು ವಿಕಸನಗೊಳಿಸುವುದರ ಜತೆ ಸದಾ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಚಿತ್ರಕಲೆ, ರಂಗೋಲಿ, ವಿಜೇತರಾದ ತಂಡದವರಿಗೂ ಬಹುಮಾನ ನೀಡಿ ಗೌರವಿಸಲಾಯಿತು.

S N Channabasappa ಭಾರತೀಯ ಸೇನೆಯ ಪ್ರವೀಣ್ ಎಸ್., ತಮ್ಮ ಸೇನೆಯ ಅನುಭವ ಹಂಚಿಕೊoಡರು. ಇದೇ ಸಂದರ್ಭದಲ್ಲಿ ಪ್ರಿಯದರ್ಶಿನಿ, ಸಾಂದೀಪಿನಿ, ಮೇರಿ ಇಮಾಕ್ಯೂಲೇಟ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ಪ್ರದರ್ಶನ ನೀಡಿದರು.

ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಕಾರ್ಯದರ್ಶಿ ಎಚ್.ಪರಮೇಶ್ವರ್, ಜಂಟಿ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಎಸ್.ಟಿ.ಶ್ರೀನಿವಾಸಮೂರ್ತಿ, ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ಚೇತನ ರಾಯನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...