Sunday, December 14, 2025
Sunday, December 14, 2025

Madhu Bangarappa ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿ – ಮಧು ಎಸ್.ಬಂಗಾರಪ್ಪ

Date:

Madhu Bangarappa ಯಾವುದೇ ವ್ಯಕ್ತಿಯ ಬೌದ್ಧಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಜಿಲ್ಲಾಡಳಿತ, ಜಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ 67ನೇ ರಾಷ್ಟ್ರಮಟ್ಟದ 19ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟವನ್ನು ಬಲೂನುಗಳನ್ನು ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಕ್ಕಳ ಪಠ್ಯ ಚಟುವಟಿಕೆಗಳಷ್ಟೇ ಅಲ್ಲದೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಿದೆ. ಸರ್ಕಾರಗಳು ಮಾಡುವ ಮಕ್ಕಳ ಮನೋವಿಕಾಸದ ಕಾರ್ಯವನ್ನು ಹಲವು ದಶಕಗಳಿಂದ ನಿರ್ವಹಿಸುತ್ತಿರುವ, ಕ್ರೀಡಾಕೂಟದ ಆತಿಥ್ಯ ವಹಿಸಿರುವ ಹಾಗೂ ಮಕ್ಕಳಲ್ಲಿ ಸಂಸ್ಕoತಿ ಮತ್ತು ಸದ್ವಿಚಾರವನ್ನು ಬೆಳೆಸುತ್ತಿರುವ ಆದಿಚುಂಚನಗಿರಿ ಟ್ರಸ್ಟ್‍ನ ಕಾರ್ಯ ಅಭಿನಂದನಾರ್ಹವಾದುದಾಗಿದೆ. ಈ ಕ್ರೀಡಾಕೂಟಕ್ಕೆ ದೇಶದ 28ರಾಜ್ಯಗಳ ಕ್ರೀಡಾಳುಗಳು ಭಾಗವಹಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದ ಅವರು ಈ ಕ್ರೀಡಾಕೂಟವು ಯಶಸ್ವಿಯಾಗಿ ನಡೆಯುವಲ್ಲಿ ಅಗತ್ಯವಿರುವ ಎಲ್ಲಾ ಸಹಕಾರವನ್ನು ಸರ್ಕಾರದಿಂದ ನೀಡಲಾಗುವುದು ಎಂದರು.

ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯ ಅನಾವರಣಗೊಳಿಸಲು ವೇದಿಕೆಗಳನ್ನು ಒದಗಿಸುವುದು ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಹಾಗೂ ಅದಕ್ಕೆ ಪ್ರೇರೇಪಣೆ ನೀಡುತ್ತಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಇನ್ನಷ್ಟು ರಚನಾತ್ಮಕ ಕಾರ್ಯಗಳನ್ನು ನಿರ್ವಹಿಸಲಿ ಎಂದವರು ಆಶಿಸಿದರು.

Madhu Bangarappa ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಅವರು ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಳುಗಳು ಸ್ಪರ್ಧಾಭಾವದಿಂದಲೇ ಭಾಗವಹಿಸಬೇಕು. ಗೆಲವು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ ಗೆಲ್ಲುವ ಮನೋಭಾವ ಅಗತ್ಯ. ಸೋಲು ಗೆಲುವಿಗೆ ಮಾರ್ಗದರ್ಶಿಯಾಗಿರಲಿದೆ ಮಾತ್ರವಲ್ಲ ಬದುಕಿಗೊಂದು ಪಾಠವಾಗಿರಲಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಮಾನವೀಯ ಸಂಬಂಧಗಳು, ಕೌಟುಂಬಿಕ ಸಂಬಂಧಗಳು, ಗುರು-ಶಿಷ್ಯ ಸಂಬಂಧಗಳು ಯಾಂತ್ರಿಕವಾಗಿರುವ ಈ ದಿನಗಳಲ್ಲಿ ರಾಜ್ಯರಾಜ್ಯಗಳ ನಡುವೆ ಸಂಬಂಧವನ್ನು ಬೆಸೆಯುವ, ಮನಸ್ಸುಗಳನ್ನು ಒಗ್ಗೂಡಿಸುವ ಕಾರ್ಯ ಅತ್ಯಂತ ಮಹತ್ವ ಪಡೆದುಕೊಳ್ಳುತ್ತವೆ. ಸ್ವಸ್ಥ್ಯ ಸಮಾಜದ ನಿರ್ಮಾಣದಲ್ಲಿ ಸಂಸ್ಕಾರ ಹಾಗೂ ಜೀವನಶಿಕ್ಷಣ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿವರು ಕ್ರೀಡಾಕೂಟದ ಯಶಸ್ಸಿಗೆ ಶುಭ-ಹಾರೈಸಿದರು.

ವಿಶೇಷ ಆಹ್ವಾನಿತರಾಗಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕಿ ಶ್ರೀಮತಿ ಸಿಂಧು ಬಿ.ರೂಪೇಶ್ ಅವರು ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಅನೇಕ ಯಶಸ್ವಿ ಕ್ರೀಡಾಕೂಟಗಳನ್ನು ಆಯೋಜಿಸಿದ ಹೆಮ್ಮೆ ನಮಗಿದೆ. ದೇಶದ ಅನ್ಯರಾಜ್ಯಗಳಿಂದ ಆಗಮಿಸಿದ ಎಲ್ಲಾ ಕ್ರೀಡಾಳುಗಳು ತಮ್ಮ ಗೆಲುವಿನ ನಗುಮೊಗದೊಂದಿಗೆ ಹಿಂದಿರುಗುವಂತೆ ಹಾರೈಸಿದರು.
ಅದಕ್ಕಾಗಿ ಆತಿಥೇಯರಾಗಿರುವ ಸಂಸ್ಥೆಗೆ ಸರ್ಕಾರದ ಪರವಾಗಿ ಧನ್ಯವಾದಗಳನ್ನು ಸಮರ್ಪಿಸಿದರು.

ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಶೇಷ ಸಾಧನೆ ಮಾಡಿದ ಕು. ಹನಿ ಇವರನ್ನು ಗುರುತಿಸಿ ಗೌರವಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಮಾಯಣ್ಣಗೌಡ, ಬಿ.ಕೃಷ್ಣಪ್ಪ, ಅನಿಲ್‍ಭೂಮರೆಡ್ಡಿ, ಗುಬ್ಬಿಗೂಡು ರಮೇಶ್, ಸಂಜಯ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...