Monday, February 2, 2026
Monday, February 2, 2026

S. Rudregowda ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ – ಎಸ್. ರುದ್ರೇಗೌಡ

Date:

S. Rudregowda ಪರಿಸರ ಸಂರಕ್ಷಣೆಯು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಆಗಿದ್ದು, ಉತ್ತಮ ಪರಿಸರದ ವಾತಾವರಣ ನಿರ್ಮಿಸಲು ಪ್ರತಿಯೊಬ್ಬರು ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸಿ ಪೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಎಲ್‌ಬಿಎಸ್ ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಪಾರ್ಕ್ನಲ್ಲಿ ಔಷಧ ವನ ನಿರ್ಮಾಣಕ್ಕಾಗಿ ಎಸ್.ರುದ್ರೇಗೌಡರ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರತಿಯೊಬ್ಬರು ಆರೋಗ್ಯದಿಂದ ಜೀವನ ನಡೆಸಲು ಉತ್ತಮ ಪರಿಸರ, ಶುದ್ಧ ಗಾಳಿ, ಕುಡಿಯುವ ನೀರು, ಒಳ್ಳೆಯ ವಾತಾವರಣ ತುಂಬಾ ಅವಶ್ಯಕ ಎಂದು ತಿಳಿಸಿದರು.

ವಿವೇಕಾನಂದ ಪಾರ್ಕ್ ಶಿವಮೊಗ್ಗದಲ್ಲಿ ಮಾದರಿ ಉದ್ಯಾನವನ ಆಗಿ ರೂಪುಗೊಂಡಿದ್ದು, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್ ಅವರ ಪ್ರಯತ್ನ ಹಾಗೂ ಛಲದಿಂದ ಸುಂದರ ಉದ್ಯಾನವನ ನಿರ್ಮಾಣ ಆಗಿದೆ. ಇಂತಹ ಪಾರ್ಕ್ಗಳ ಸಂರಕ್ಷಣೆಯು ಮುಖ್ಯ ಎಂದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್ ಮಾತನಾಡಿ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಅವರ ಅನುದಾನದಿಂದ ಮಾದರಿ ಪಾರ್ಕ್ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಯೋಗ ಮಂದಿರ, ನವಗ್ರಹ ವನ, ಔಷಧಿ ವನ ಒಳಗೊಂಡಿದೆ ಎಂದು ಹೇಳಿದರು.

ಜೆಸಿಐ ವಿವೇಕ್ ಕಾರ್ಯದರ್ಶಿ ಮಂಜು, ಪಾರ್ಕ್ ನಿರ್ವಹಣೆ ಅಧ್ಯಕ್ಷ ಕಾಟನ್ ಜಗದೀಶ್, ಸತೀಶ್ ಪಾರ್ಕ್ ಸಮಗ್ರ ಅಭಿವೃದ್ಧಿ ಕುರಿತು ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.

S. Rudregowda ನಿವಾಸಿ ಸಂಘದ ಅಧ್ಯಕ್ಷ ಪಂಚಣ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಮಲತಾ ಭೂಪಾಳಂ, ಸುರೇಖಾ ಮುರಳೀಧರ್, ಮಂಜುನಾಥ, ರಾಮದಾಸ್, ವೆಂಕಟೇಶ್, ಮಹೇಶ್ವರಪ್ಪ, ರೋಟರಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪರಿಸರ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...