Sunday, September 27, 2026
Sunday, September 27, 2026

District level workshop ಫೆ.2ರಂದು ಜಿಲ್ಲಾ ಮಟ್ಟದ ಕಾರ್ಯಾಗಾರ

Date:

District level workshop ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇವರುಗಳ ಸಹಯೋಗದೊಂದಿಗೆ ಫೆ. 02 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗ ನಗರದ ಐ.ಎಂ.ಎ. ಸಭಾಂಗಣದಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ, ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ-1994 ವಿಷಯದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ. ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಉಪಸ್ಥಿತರಿರಲಿದ್ದಾರೆ.

District level workshop ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಪಿ.ಸಿ.ಪಿ.ಎನ್.ಡಿ.ಟಿ. ಉಪನಿರ್ದೇಶಕ ಡಾ. ವಿವೇಕ್ ದೊರೈ, ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷ ವಿ., ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ಟಿ.ಡಿ., ಮೆಗ್ಗಾನ್ ಭೋದನಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್, ಪಿ.ಸಿ.ಪಿ.ಎನ್.ಡಿ.ಟಿ. ಅಧ್ಯಕ್ಷ ಡಾ. ಧನಂಜಯ ಸರ್ಜಿ ಇವರುಗಳು ಭಾಗವಹಿಸಲಿದ್ದಾರೆ.

ಪಿ.ಸಿ.ಪಿ.ಎನ್.ಡಿ.ಟಿ. ಸದಸ್ಯ ಕಾರ್ಯದರ್ಶಿ ಡಾ. ಶಿವಾನಂದ ಹಾಗೂ ಸಲಹೆಗಾರರು ವೆಂಕಟೇಶ್ ರಾವ್ ಇವರುಗಳು ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...