Sunday, September 27, 2026
Sunday, September 27, 2026

Shakahaari Movie ಶಾಖಾಹಾರಿ ಸಿನಿಮಾದ ಇಂಟ್ರೆಸ್ಟಿಂಗ್ ಟ್ರೈಲರ್ ರಿಲೀಸ್

Date:

Shakahaari Movie ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ನಿರ್ಮಾಣ ಮಾಡಿರುವ ಹಾಗೂ ಲಾಸ್ಟ್ ಪೇಜ್ ಕ್ರಿಯೇಶನ್ ಸಹಯೋಗದಲ್ಲಿ ಮಲೆನಾಡಿನಲ್ಲಿ ಚಿತ್ರೀಕರಿಸಿದ ಶಾಖಾಹಾರಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಿದೆ.

ಶಾಖಾಹಾರಿ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರಂಗಾಯಣ ರಘು, ಗೋಪಾಲ್ ಕೃಷ್ಣ ದೇಶಪಾಂಡೆ ಮತ್ತು ಸುಜಯ್ ಶಾಸ್ತ್ರಿ, ಹರಿಣಿ, ಪ್ರತಿಮಾ ನಾಯಕ್, ವಿನಯ್ ಯು.ಜೆ., ನಿಧಿ ಹೆಗ್ಡೆ, ಶ್ರೀಹರ್ಷ ಗೋಭಟ್ಟ ಮತ್ತಿತರರು ನಟಿಸಿದ್ದಾರೆ.

ರಾಜೇಶ್ ಕೀಳಂಬಿ, ರಂಜಿನಿ ಪ್ರಸನ್ನ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ನ ಚೊಚ್ಚಲ ಸಿನಿಮಾ ಇದಾಗಿದೆ.

ತೀರ್ಥಹಳ್ಳಿಯ ಮೇಳಿಗೆ ಎಂಬ ಊರಿನಲ್ಲಿ ಈ ಸಿನಿಮಾವನ್ನು ಚಿತ್ರೀಕರಣ ಮಾಡಲಾಗಿದೆ. ಶಾಖಾಹಾರಿ ಸಿನಿಮಾದ ಮೊದಲ ಹಾಡು ಬಿಡುಗಡೆಗೊಂಡಿದ್ದು, ಹಾಡನ್ನು ಕೇಳಿ ಸಿನಿಪ್ರಿಯರು ಫಿದಾ ಆಗಿದ್ದಾರೆ.

ಹೊಸ ಪ್ರತಿಭೆ ಸಂದೀಪ್ ಸುಂಕದ್ ಈ ಚಿತ್ರದ ಕಥೆ ಮತ್ತು ನಿರ್ದೇಶನವನ್ನ ಮಾಡಿದ್ದಾರೆ.

ವಿಶ್ವಜಿತ್ ರಾವ್ ರವರ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ & ಆಶಿಕ್ ಕುಸುಗೊಳ್ಳಿ ರವರ ಗ್ರೇಡಿಂಗ್ ಈ ಚಿತ್ರಕ್ಕಿದೆ.

ಸಿನಿಮಾದ ಟ್ರೈಲರ್ ಅತ್ಯದ್ಭುತವಾಗಿದ್ದು, MRT Music YouTube channel ನಲ್ಲಿ ಟ್ರೈಲರ್ ಬಿಡುಗಡೆಯಾಗಿದೆ.

Shakahaari Movie ರಂಗಾಯಣ ರಘು ಅವರು ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಸಿನಿಮಾ ಇದೇ ತಿಂಗಳ ಫೆ. 16ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...