Sunday, September 27, 2026
Sunday, September 27, 2026

Shivamogga Deputy Commissioner ನೂತನ ಜಿಲ್ಲಾಧಿಕಾರಿಗಳಿಗೆ ಅದ್ದೂರಿ ಸ್ವಾಗತ

Date:

Shivamogga Deputy Commissioner ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿ ನೂತನವಾಗಿ ಆಗಮಿಸಿರುವ ಶ್ರಿಯುತ ಮಾನ್ಯ ಗುರುದತ್ ಹೆಗಡೆ ಐ.ಎ.ಸ್, ಮಾನ್ಯ ಜಿಲ್ಲಾಧಿಕಾರಿಯವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್ ಪುಷ್ಪಗುಚ್ಚ ನೀಡಿ ಗೌರವ ಸಮರ್ಪಣೆ ಮಾಡಿ ಶುಭ ಹಾರೈಸಿದರು.

Shivamogga Deputy Commissioner ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಸಾರ್ವಜನಿಕರ ಅಭಿವೃದ್ಧಿ ಪರ ಮತ್ತು ಸೇವಾ ಮನೋಭಾವನೆಯೊಂದಿಗೆ ಸರ್ಕಾರದ ಮದ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸುತ್ತಾ ಜಿಲ್ಲೆಯ ಪ್ರವಾಸಿ ತಾಣಗಳ ಮೂಲಸೌಕರ್ಯಗಳ ಅಭಿವೃದ್ಧಿಯ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕೈಗಾರಿಕಾಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಮಾಹಿತಿ ನೀಡಿದರು. ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಆಡಳಿತಾತ್ಮಕ ಸುವ್ಯವಸ್ಥೆಯನ್ನು ನಿರ್ವಹಿಸುವ ಆಶಾಭಾವನೆಯನ್ನು ಹೊಂದಿರುವುದಾಗಿ ಅಧ್ಯಕ್ಷರು ತಿಳಿಸಿದರು.

ಮಾನ್ಯ ಜಿಲ್ಲಾಧಿಕಾರಿಗಳು ಸಂಘದ ವತಿಯಿಂದ ಆತ್ಮೀಯ ಗೌರವ ಸ್ವೀಕರಿಸಿ ಮಾತನಾಡಿ ಜಿಲ್ಲೆಯ ಅಭಿವೃದ್ಧಿಯ ನೆಲೆಯಲ್ಲಿ ಶಿವಮೊಗ್ಗ ಜನತೆ ಮತ್ತು ತಮ್ಮಗಳ ಸಲಹೆ-ಸಹಕಾರದೊಂದಿಗೆ ಜಿಲ್ಲೆಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರ‍್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೊಬಳೀದಾರ್, ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಜೆ. ಆರ್ ವಾಸುದೇವ, ನಿರ್ದೇಶಕರುಗಳಾದ ಕೆ.ಎಸ್ ಸುಕುಮಾರ್, ಪರಮೇಶ್ವರ ಈ, ಪ್ರದೀಪ್ ವಿ.ಯಲಿ, ಜಗದೀಶ್ ಮಾತನವರ್, ಗಣೇಶ್ ಎಂ. ಅಂಗಡಿ, ಮಾಜಿ ಅಧ್ಯಕರುಗಳಾದ ಡಿ.ಎಂ. ಶಂಕರಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...