Sunday, June 21, 2026
Sunday, June 21, 2026

Mental Health Workshops ಮಾನಸಿಕ ಆರೋಗ್ಯದ ಅರಿವು ಕಾರ್ಯಾಗಾರ

Date:

Mental Health Workshops ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆ.3 ರಂದು ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಅರಿವು ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ವಕೀಲರ ಸಂಘ ಶಿವಮೊಗ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಆರ್.ದೇವದಾಸ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಮಾರ್ಗದರ್ಶಕರಾದ ಎನ್.ಕುಮಾರ್ ಅಧ್ಯಕ್ಷತೆ ವಹಿಸುವರು.

Mental Health Workshops ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಜಿಲ್ಲಾಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥನಾಯಕ್, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಆ.ಕು.ಕ ಆಯುಕ್ತರಾದ ಡಿ.ರಣದೀಪ್, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ.ನವೀನ್ ಭಟ್ ವೈ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಆ.ಕು.ಕ ಸೇವೆಗಳ ನಿರ್ದೇಶಕರಾದ ಡಾ.ಪುಷ್ಪಲತಾ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...