Sunday, September 27, 2026
Sunday, September 27, 2026

Job Vacancies In Shimoga ಗ್ರಂಥಾಲಯ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

Date:

Job Vacancies In Shimoga ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‍ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾಯಿಯನ್ವಯ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.

Job Vacancies In Shimoga ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನ. ಅರ್ಜಿಗಳನ್ನು ಸಂಬಂಧಿಸಿದ 14 ಗ್ರಾ.ಪಂ ಗಳಲ್ಲಿ ಮತ್ತು ವೆಬ್‍ಸೈಟ್ https://shimoga.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಭಿವೃದ್ದಿ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಗ್ರಾ.ಪಂ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...