Thursday, June 18, 2026
Thursday, June 18, 2026

Siddaramaiah ಪಕ್ಷ,ಜಾತಿ & ಧರ್ಮಾತೀತವಾಗಿ ಇರುವ ಗ್ಯಾರಂಟಿ ಗಳನ್ನ ಬಿಟ್ಟಿ ಗ್ಯಾರಂಟಿ ಎಂದು ಪ್ರಕಟಿಸುವ ಮೊದಲು ಪರಿಶೀಲಿಸಿ- ಸಿದ್ಧರಾಮಯ್ಯ

Date:

Siddaramaiah ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು.
ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ.
ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ತಿಳಿಸಿದರು.

Siddaramaiah ಸ್ವಾತಂತ್ರ್ಯಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ. ಜನ ಸಾಮಾನ್ಯರು ಪತ್ರಿಕಾವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು. ಪತ್ರಿಕಾವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...