Kyasanur Forest Disease ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಖಾಯಿಲೆ ಹೆಚ್ಚಾಗುತ್ತಿದೆ.
ಮಲೆನಾಡಿನಲ್ಲಿ ದಿನದಿಂದ ದಿನಕ್ಕೆ ಮಂಗನ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ.
ಈಗಾಗಲೇ ಮಂಗನ ಖಾಯಿಲೆಯಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಮಂಗನ ಖಾಯಿಲೆ ಪ್ರಕರಣಗಳು ಹೆಚ್ಚದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಣದೀಪ್ ಅವರು ಸೂಚನೆ ನೀಡಿದ್ದಾರೆ.
ಮಂಗನ ಕಾಯಿಲೆ ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್ ಡಿ ಪರೀಕ್ಷೆ ಮಾಡಿಸಬೇಕು.
ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮ ಕೈಗೊಳ್ಳುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ.
ಜನವರಿ 1 ರಿಂದ ಫೆ.2 ರವರೆಗೆ ರಾಜ್ಯದಲ್ಲಿ ಒಟ್ಟು 2288 ಕೆಎಫ್ ಡಿ ಪರೀಕ್ಷೆ ನಡೆಸಲಾಗಿದೆ.ಶಿವಮೊಗ್ಗ ದಲ್ಲಿ 12, ಉತ್ತರ ಕನ್ನಡ 34 ಹಾಗೂ ಚಿಕ್ಕಮಗಳೂರಿನಲ್ಲಿ 3 ಸೇರಿ ಒಟ್ಟು 49 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ.
ಕೆಎಫ್ ಡಿ ಪಾಸಿಟಿವ್ ಪ್ರಕರಣ ಪತ್ತೆಯಾದ ತಕ್ಷಣ ಆಸ್ಪತ್ರೆ ಗೆ ದಾಖಲಾಗುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ರೋಗ ಪ್ರಸರಣ ಸಾಮಾನ್ಯವಾಗಿ ಜನವರಿ ಯಿಂದ ಮಾರ್ಚ್ ವರೆಗೆ ಇರುತ್ತದೆ. ತೀರ್ಥ ಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆ ಗಳಲ್ಲಿ ಹಾಸಿಗೆಗಳನ್ನು ಮೀಸಲಿರಿಸುವಂತೆ ಆಯುಕ್ತರ ಸೂಚನೆ ನೀಡಿದ್ದಾರೆ.
Kyasanur Forest Disease ಅಗತ್ಯ ಔಷಧಿಗಳ ಲಭ್ಯತೆ ಇರುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆ ಕ್ರಮ ಕೊಳ್ಳುವಂತೆ ತಿಳಿಸಲಾಗಿದೆ