Tuesday, February 3, 2026
Tuesday, February 3, 2026

B Y Raghavendra ಶಿವಮೊಗ್ಗದಲ್ಲಿ ಉದ್ಯಮಿಗಳು ಬಂಡವಾಳ ಹೂಡುತ್ತಿರುವುದು ಸಂತೋಷದ ಸಂಗತಿ- ಸಂಸದ ರಾಘವೇಂದ್ರ

Date:

B Y Raghavendra ಶಿವಮೊಗ್ಗದ ಹೃದಯ ಭಾಗವಾದ ಪಾರ್ಕ್ ಬಡಾವಣೆಯಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ನೂತನ “ಮಾತೃ ವಾತ್ಸಲ್ಯ-ಶಿಶು ಮತ್ತು ಮಕ್ಕಳ ಆಸ್ಪತ್ರೆ” ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿವೈ ರಾಘವೇಂದ್ರ ಅವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಾರ್ವಜನಿಕ ಸೇವೆಗೆ ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು.

ಶಿವಮೊಗ್ಗ ಅತ್ಯಂತ ವೇಗವಾಗಿ ಎಲ್ಲಾ ರೀತಿಯ ಸಕಲ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಬಂಡವಾಳ ಶಾಹಿಗಳು ನಗರದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವುದು ಸಂತೋಷದ ಸಂಗತಿ. ಮುಂದಿನ ದಿನಗಳಲ್ಲಿ ನಮ್ಮ ಶಿವಮೊಗ್ಗ ರಾಜಧಾನಿಯ ನಂತರ ಪ್ರಮುಖ ನಗರವಾಗಿ ಹೆಗ್ಗುರುತು ಪಡೆಯುವುದು ಶತ ಸಿದ್ಧ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಸಂತೋಷ ಹಂಚಿಕೊಂಡರು.

B Y Raghavendra ಈ ಸಂದರ್ಭದಲ್ಲಿ ಡಾ. ಕಿರಣ್ ಅವರು, ಡಾ. ಪೃಥ್ವಿ ಅವರು, ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಅವರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...