Rotary Club Shimoga ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸುವುದು ಅಭಿನಂದನೀಯ ಕಾರ್ಯ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ಅಧ್ಯಕ್ಷ ಸಿ.ರಾಜು ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯಲ್ಲಿ ಮಹತ್ತರ ಪಾತ್ರ ವಹಿಸುವ ಸಾವಿರಾರು ಮಾರ್ಗದರ್ಶಕರು ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ರೋಟರಿ ಕ್ಲಬ್‌ಗಳು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತ ಬಂದಿದ್ದು, ಸದ್ದಿಲ್ಲದೇ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಚಟುವಟಿಕೆಗಳನ್ನು ಆಯೋಜಿಸಿ ಸಮಾಜಮುಖಿಯಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.
ಆರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈಜು ಕಲಿಸುತ್ತಿರುವ ಈಜು ತರಬೇತುದಾರರಾದ ಸಂಗಮೇಶ್ ಮಲ್ಲಪ್ಪ ಪಾರಶೆಟ್ಟಿ ಹಾಗೂ ರಮೇಶ ಮಲ್ಲಪ್ಪ ಪಾರಶೆಟ್ಟಿ ಸಹೋದರರಿಗೆ ಅಭಿನಂದಿಸಲಾಯಿತು.
ಗೋಪಾಳಗೌಡ ಬಡಾವಣೆಯ ಕ್ರೀಡಾ ಸಂಕೀರ್ಣದಲ್ಲಿ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈವರೆಗೂ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅನೇಕ ಪಾರಿತೋಷಕಗಳನ್ನು ವಿದ್ಯಾರ್ಥಿಗಳು ಗೆಲ್ಲುವಂತೆ ತರಬೇತಿ ನೀಡಿದ್ದಾರೆ.
Rotary Club Shimoga ಸತತ 25 ವರ್ಷಗಳಿಂದ ಬಸ್ ವ್ಯವಸ್ಥೆ ಸರಿ ಇಲ್ಲದಿದ್ದರೂ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶೆಟ್ಟಿಕೆರೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ತೀರ್ಥಲಿಂಗಪ್ಪ ಅವರನ್ನು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ಅಡ್ವೈಸರ್ ಉದಯ್‌ಪೇಟೆ, ಪ್ರಕಾಶಮೂರ್ತಿ, ಮಂಜುಳಾ ರಾಜು, ಇನ್ನಿತರ ಸದಸ್ಯರು, ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.