Shimoga District Chamber of Commerce & Industry ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ರಮೇಶಚಂದ್ರ ಲಹೋಟಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ನೇತೃತ್ವದಲ್ಲಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಠಿಯಿಂದ ರೊಡ್ ಶೋ ನಡೆಸುವ ಬಗ್ಗೆ ರಮೇಶ್‌ಚಂದ್ರ ಲಹೋಟಿ ಅವರೊಂದಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಸಮಾಲೋಚನೆ ನಡೆಸಿದರು.
ಎಫ್‌ಕೆಸಿಸಿಐ ಅಧ್ಯಕ್ಷ ರಮೇಶಚಂದ್ರ ಅವರು ಬರುವ ದಿನಗಳಲ್ಲಿ ಕಾರ್ಯರೂಪಕ್ಕೆ ತರಲು ಸಲಹೆ ನೀಡಿದರು.
ಎಫ್‌ಕೆಸಿಸಿಐ ಅಧ್ಯಕ್ಷ ರಮೇಶಚಂದ್ರ ಲಹೋಟಿ ಮಾತನಾಡಿ, ಶಿವಮೊಗ್ಗ ನಗರ ದ್ವಿತೀಯ ಸ್ತರದ ನಗರವಾಗಿದ್ದು, ಕರ್ನಾಟಕ ರಾಜ್ಯದ ಹೃದಯ ಭಾಗದಲ್ಲಿದೆ. ಪಶ್ಚಿಮ ಘಟ್ಟಗಳ ದಟ್ಟ ಮನೋಹರ ಜೀವ ವೈವಿಧ್ಯಗಳ ಐತಿಹಾಸಿಕ ಸ್ಥಳಗಳು, ಭಕ್ತಿ ಕ್ಷೇತ್ರಗಳು, ಪ್ರೇಕ್ಷಣೀಯ ಸ್ಥಳಗಳು ಮತ್ತು ಸಾಂಸ್ಕೃತಿಕ ನಗರವಾಗಿದೆ ಎಂದು ಹೇಳಿದರು.
Shimoga District Chamber of Commerce & Industry ಶಿವಮೊಗ್ಗ ಉತ್ತಮ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಜಿಲ್ಲೆಯಾಗಿದ್ದು, ಪೂರಕವಾಗಿ ಶಿವಮೊಗ್ಗ ವಾಣಿಜ್ಯ ಮತ್ತು ಕೈಗಾರಿಕಾ ಸಂಘದೊಂದಿಗೆ ಕೈಜೋಡಿಸಿ ಕೆಲಸ ಮಾಡಲಾಗುವುದು. ಶಿವಮೊಗ್ಗ ನಗರಕ್ಕೆ ರಸ್ತೆ, ರೈಲು ಮತ್ತು ವಾಯು ಮಾರ್ಗಗಳ ಸಂಪರ್ಕವಿದ್ದು, ಚಿಕ್ಕಮಗಳೂರು, ಉಡುಪಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಕೈಗಾರಿಕಾ ಮತ್ತು ವ್ಯಾಪಾರೋದ್ಯಮಗಳ ಅಭಿವೃದ್ಧಿಯ ವಿಚಾರವಾಗಿ ಚಿಂತನ ಮಂಥನ ಮಾಡಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಸಹಕಾರ ಕೊಡುವುದಾಗಿ ಆಶ್ವಾಸನೆ ನೀಡಿದರು.
ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಮಟ್ಟದಲ್ಲಿ ಇರುವ ಕೆಲವೇ ಕೆಲವು ಕೈಗಾರಿಕಾ ಸಂಘಗಳ ಪೈಕಿ ಶಿವಮೊಗ್ಗ ಅತಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಎಫ್‌ಕೆಸಿಸಿಐ ನಿರ್ದೇಶಕರಾದ ಡಿ.ಎಂ.ಶಂಕರಪ್ಪ, ಮಾಜಿ ಅಧ್ಯಕ್ಷ ದಿನೇಶ್ ತಲ್ಲಂ ವೆಂಕಟೇಶ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಪದಾಧಿಕಾರಿಗಳು ಉಪಸ್ಥಿತರಿದ್ದರು.