Thursday, September 17, 2026
Thursday, September 17, 2026

Siddaramaiah ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಎಂಪಿ ಗಳಿಗೂ ದೆಹಲಿ ಚಲೋ ನಲ್ಲಿ ‌ಭಾಗವಹಿಸಲು ಸಿದ್ಧರಾಮಯ್ಯ ಕೋರಿಕೆ ಪತ್ರ

Date:

Siddaramaiah ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ಎನ್ ಸೀತಾರಾಮನ್
ಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ ಖರ್ಗೆ
ಅವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್. ಡಿ. ದೇವೇಗೌಡ್ರು
, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಜೋಶಿ ಪ್ರಹ್ಲಾದ್
, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಡಿ ವಿ ಸದಾನಂದ ಗೌಡ
ಅವರು ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ.

Siddaramaiah ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...