Saturday, December 6, 2025
Saturday, December 6, 2025

Scientific Academy ಮೌಢ್ಯಮುಕ್ತ ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಮನವಿ

Date:

Scientific Academy ಸದಾಕಾಲ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಮೌಡ್ಯ ಮುಕ್ತ ವೈಜ್ಞಾನಿಕ ಅಕಾಡೆಮಿ ಸ್ಥಾಪಿಸಬೇಕು ಎಂದು ಜಿಲ್ಲಾ ವೈಜ್ಞಾನಿಕ ಸಂಶೋಧನಾ ಪರಿಷತ್ ಮುಖoಡರುಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ಸಂಬoಧ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಮುಖಂಡರುಗಳು ಸಾರ್ವಜನಿಕರಲ್ಲಿನ ಮೌಢ್ಯತೆಯನ್ನು ನಿವಾರಿಸಿ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಲು ಸರ್ಕಾರ ಮುಂದಾಗಬೇಕು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್ ಕಲ್ಯಾಣ ಕರ್ನಾಟಕದಲ್ಲಿ ಮೌಢ್ಯ ಮುಕ್ತ ನಿವಾರಣೆಗೆ ವೈಜ್ಞಾನಿಕ ವಿಶ್ವವಿದ್ಯಾಲಯ ಸ್ಥಾಪಿಸಬೇಕು.

ಶಾಲಾ-ಕಾಲೇಜು ಹಂತದ ಮಕ್ಕಳಲ್ಲಿ ವೈಜ್ಞಾನಿಕ ಜಾಗೃತಿ ಮೂಡಿಸಲು ಸಮಾಜ ಕಲ್ಯಾಣ, ಶಿಕ್ಷಣ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ವೈಜ್ಞಾನಿಕ ಜಾಗೃತಿ ಜಾಥಾ ನಡೆಸಲು ಅನುದಾನ ಒದಗಿಸಬೇಕು ಎಂದು ಹೇಳಿದರು.
ಈಗಾಗಲೇ ಪರಿಷತ್ 2020ನೇ ಸಾಲಿನಲ್ಲಿ ಪ್ರಾರಂಭಗೊ0ಡು ರಾಜ್ಯದ ಪ್ರತಿ ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಮಿತಿಗಳು ಪ್ರಾರಂಭವಾಗಿ ಜನಸಾಮಾನ್ಯರು ಮತ್ತು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಮಾನ ವೀಯ ಮೌಲ್ಯ, ವೈಜ್ಞಾನಿಕ ಕೌಶಲ್ಯ, ಚಿಂತನಾಶೀಲತೆ, ಮನಸ್ಸಿನ ಸದೃಢತೆ ಬೆಳೆಸಲು ಜನಮನದಲ್ಲಿ ಶ್ರಮಿಸುತ್ತಿದೆ ಎಂದರು.

ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಹಲವಾರು ಸಂಶೋಧನಾ ಕಾರ್ಯಗಳಲ್ಲಿ ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳುತ್ತಾ ಜನಮನದಲ್ಲಿ ನೆಲೆಗೊಂಡಿದೆ. ವಿಜ್ಞಾನ-ಸಾಹಿತ್ಯ ಸಮಾನಗಮಗೊಳಿಸಿ ಮಕ್ಕಳಲ್ಲಿ ಮಾನವೀಯತೆ, ಸೌಹಾರ್ದತೆ, ಪ್ರಯೋಗಶೀಲತೆ ಬೆಳೆಸುವುದು ಪರಿಷತ್ತಿನ ಮೂಲ ಧ್ಯೇಯವಾಗಿದೆ ಎಂದರು.

ಹೀಗಾಗಿ ಪ್ರತಿ ವರ್ಷ ನಡೆಯುವ ವೈಜ್ಞಾನಿಕ ಸಮ್ಮೇಳನಕ್ಕೆ 1.50 ಕೋಟಿ ಅನುದಾನ ನೀಡುವುದು, ಪರಿಷತ್ತಿ ನಿಂದ ಪ್ರಕಟವಾಗುತ್ತಿರುವ ವಿಜ್ಞಾನ ಸಿರಿ ಮಾಸ ಪತ್ರಿಕೆಯನ್ನು ಗ್ರಾ.ಪಂ. ಹಾಗೂ ಶಾಲಾ-ಕಾಲೇಜುಗಳ ಗ್ರಂಥಾ ಲಯಗಳಿಗೆ ಖರೀದಿಸಲು ಶಿಕ್ಷಣ ಇಲಾಖೆಗೆ ಆದೇಶಿಸಬೇಕು ಎಂದು ಮನವಿಯಲ್ಲಿ ತಿಳಿಸಿದರು.

Scientific Academy ಸಾರ್ವಜನಿಕರಲ್ಲಿ ಸದಾ ವೈಜ್ಞಾನಿಕ ಜಾಗೃತಿಗೊಳಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುವ ಹಿನ್ನೆಲೆ ಯಲ್ಲಿ ರಾಜ್ಯಸರ್ಕಾರ ವೈಜ್ಞಾನಿಕ ಅಕಾಡೆಮಿ ಹಾಗೂ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದು ಅನಿವಾರ್ಯವಾ ಗಿರುವ ಕಾರಣ ಸರ್ಕಾರ ನಿರ್ಧಾರ ಕೈಗೊಂಡು ಮಕ್ಕಳ ಬೆಳವಣಿಗೆಗೆ ಶ್ರಮಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪರಿಷತ್ತಿನ ರಾಜ್ಯ ಉಪಾಧ್ಯಕ್ಷೆ ಗೌರಿಪ್ರಸನ್ನ, ಹಾಸನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್, ಚಿಕ್ಕ ಮಗಳೂರು ಜಿಲ್ಲಾ ಸಂಚಾಲಕ ಜಿನೇಶ್ ಇರ್ವತ್ತೂರು, ಕಾರ್ಯದರ್ಶಿ ಹೆಚ್.ಎಸ್.ಜಗದೀಶ್, ಸದಸ್ಯರುಗಳಾದ ಬಾಲಚಂದ್ರ, ಪ್ರಾನ್ಸಿಸ್ ಮತ್ತಿತರರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...