Friday, March 20, 2026
Friday, March 20, 2026

Shimoga District Chamber of Commerce & Industry ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ & ಜೀವನ ಶೈಲಿ ರೂಢಿಸಿಕೊಳ್ಳಿ- ಅರವಿಂದ್ ತ್ರಿಪಾಠಿ

Date:

Shimoga District Chamber of Commerce & Industry ಪ್ರತಿಯೊಬ್ಬ ವ್ಯಕ್ತಿಯು ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ ಶೈಲಿ ಹಾಗೂ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಉಮ ಕನ್ಸ್ಯೂಮರ್ ಪ್ರಾಡಕ್ಟ್ಸ್‌ ಬಿಸಿನೆಸ್ ಹೆಡ್ ಅರವಿಂದ್ ತ್ರಿಪಾಠಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದಲ್ಲಿ ಶಕ್ತಿ ಇನ್ ಕಾರ್ಪೋರೇಷನ್ ವತಿಯಿಂದ ವರ್ತಕರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಅಯೋಡಿನ್ ಉಪ್ಪು ಕುರಿತ ಮಾಹಿತಿ ನೀಡಿ, ಮನುಷ್ಯನ ದೇಹಕ್ಕೆ ಅವಶ್ಯವಿರುವ ಉಪ್ಪಿನ ಪ್ರಮಾಣ ಹಾಗೂ ಪ್ರಯೋಜನಗಳ ಬಗ್ಗೆ ತಿಳವಳಿಕೆ ಹೊಂದಬೇಕು. ಆಹಾರದಲ್ಲಿ ಸರಿಯಾದ ಪ್ರಮಾಣದಲ್ಲಿ ಉಪ್ಪು ಬಳಸಬೇಕು ಎಂದು ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಉಪ್ಪುಗಳ ಲಭ್ಯತೆ ಇದೆ. ಆದರೆ ಸಾರ್ವಜನಿಕರು ಗುಣಮಟ್ಟ ಇರುವ ಉಪ್ಪು ಬಳಸಬೇಕು. ಇದರಿಂದ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ರಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.
ಶಕ್ತಿ ಇನ್ ಕಾರ್ಪೋರೇಷನ್ ಮ್ಯಾನೇಜಿಂಗ್ ಪಾರ್ಟನರ್ ಶಿಲ್ಪಾ ಗೋಪಿನಾಥ್ ಮಾತನಾಡಿ, ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪು ಬಳಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಆಗುತ್ತದೆ. ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಕ್ತಿ ಇನ್ ಕಾರ್ಪೋರೇಷನ್ ವತಿಯಿಂದ ಫೆಬ್ರವರಿ ತಿಂಗಳಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ವರ್ತಕರು ಹಾಗೂ ಕುಟುಂಬ ಸದಸ್ಯರಿಗೆ ಶುಭಾಶಯ ಕೋರಲಾಯಿತು. ವಿವಿಧ ಬಹುಮಾನ ಮತ್ತು ಉಡುಗೊರೆಗಳನ್ನು ನೀಡಲಾಯಿತು.

Shimoga District Chamber of Commerce & Industry ಸಮಾರಂಭದಲ್ಲಿ ಭಾಗವಹಿಸಿದ್ದ ಹಿರಿಯ ವರ್ತಕರಿಗೆ ಶಕ್ತಿ ಇನ್ ಕಾರ್ಪೋರೇಷನ್ ವತಿಯಿಂದ ಸನ್ಮಾನಿಸಲಾಯಿತು. ಉಮ ಕನ್ಸ್ಯೂಮರ್ ಪ್ರಾಡಕ್ಟ್ಸ್‌ ಕರ್ನಾಟಕ ಪ್ರದೇಶ ವ್ಯಾಪ್ತಿಯ ಸೇಲ್ಸ್ ಮ್ಯಾನೇಜರ್ ಗೌಸ್‌ಪೀರ್ ಮತ್ತು ವರ್ತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...