Wednesday, September 23, 2026
Wednesday, September 23, 2026

Janaspandana Program ಜನಸ್ಪಂದನಕ್ಕೆ ಹೆಚ್ಚು ಸಂಖ್ಯೆ ಅರ್ಜಿಗಳು ,ರಾಜ್ಯದಲ್ಲಿ ಆಡಳಿತ ಕುಸಿದಿರುವುದರ ಸಂಕೇತ- ಎಸ್.ದತ್ತಾತ್ರಿ

Date:

Janaspandana Program ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ರಾಜ್ಯ ವ್ಯಾಪ್ತಿಯಿಂದ ಸುಮಾರು 20.000 ಜನಕ್ಕೂ ಹೆಚ್ಚು ಆಗಮಿಸಿ 12372 ಪರಿಹಾರಕ್ಕಾಗಿ ಅರ್ಜಿಗಳು ಬಂದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕರಾದ ಎಸ್ ದತ್ತಾತ್ರೇಯವರು ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯಿತಿಯಲ್ಲೂ ಕೂಡ ಪರಿಹಾರ ಸ್ಥಾನದ ಬೆಂಗಳೂರಿನಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದು ಅರ್ಜಿ ನೀಡಿರುವುದು ನಿಜಕ್ಕೂ ಅತ್ಯಂತ ಬೇಸರದ ಸಂಗತಿ ಎಂದಿದ್ದಾರೆ.

Janaspandana Program ಉಸ್ತುವಾರಿ ಸಚಿವರುಗಳು ಜಿಲ್ಲಾಡಳಿತವನ್ನು ನಿಯಂತ್ರಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾಗಿರುವುದು ಎದ್ದು ಕಾಣುತ್ತಿದೆ. ಈ ಕಾರಣಕ್ಕಾಗಿ ಜನರು ಬೇಸತ್ತು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ದೌಡಾಯಿಸುವ ಪರಿಸ್ಥಿತಿ ಬಂದಿರೋದು ನಿಜಕ್ಕೂ ಖೇದಕರ. ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಅರ್ಜಿಗಳು ಇನ್ನೂ ಕೂಡ ವಿಲೆವಾರಿಯಾಗದೆ ಪರಿಹಾರ ಸಿಗದಿರುವುದು ಖಂಡನೀಯ ಎಂದಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಜವಾಬ್ದಾರಿ ಆಡಳಿತ ನೀತಿಯಿಂದಾಗಿ ರಾಜ್ಯದ ಜನರು ಅನಾಥರಾಗಿದ್ದಾರೆ. “ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಈ ತಕ್ಷಣವೇ ಮಾನ್ಯ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿ ಆಡಳಿತ ಯಂತ್ರ ಚುರುಕುಗೊಳಿಸಲು ನಿರ್ದೇಶನ ನೀಡಬೇಕಾಗಿ ಮಾನ್ಯ ರಾಜ್ಯಪಾಲರಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...