Thursday, June 18, 2026
Thursday, June 18, 2026

BJP Shivamogga ಶಿವಮೊಗ್ಗದಲ್ಲಿ ಬಿಜೆಪಿಯಿಂದ ಗೋಡೆ ಬರಹಕ್ಕೆ ಚಾಲನೆ

Date:

BJP Shivamogga ವಿಕಸಿತ ಭಾರತಕ್ಕಾಗಿ ದೇಶಾದ್ಯಂತ ಇಂದಿನಿಂದ 3 ದಿನಗಳ ಕಾಲ ನಡೆಯುತ್ತಿರುವ “ಗ್ರಾಮ ಚಲೋ” ಅಭಿಯಾನದ ಅಂಗವಾಗಿ ಶಿವಮೊಗ್ಗದ ಜಯನಗರದಲ್ಲಿ ಅಂಬೇಡ್ಕರ್ ಶಕ್ತಿ ಕೇಂದ್ರದ , 10ನೇ ವಾರ್ಡ್ ಬೂತ್ ಪದಾಧಿಕಾರಿಗಳೊಂದಿಗೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಸಭೆ ನಡೆಸಿದರು.

BJP Shivamogga ಬೂತ್ 71ರಲ್ಲಿ “2024 ಮತ್ತೊಮ್ಮೆ ಬಿಜೆಪಿ” ಗೋಡೆ ಬರಹಕ್ಕೆ ಚಾಲನೆ ನೀಡಿ, ಬೂತ್ ನ ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ತಿಳಿಸಲಾಯಿತು. ಬಿ. ವೈ ರಾಘವೇಂದ್ರ ಅವರ ಯೋಜನೆಗಳ ಕುರಿತಾಗಿ QR ಸ್ಕ್ಯಾನ್ ಮಾಡಿ ವೀಕ್ಷಿಸಲು ತಿಳಿಸಲಾಯಿತು.

ಪಕ್ಷದ ಕಾರ್ಯಕರ್ತರು ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಮೋದಿ ಜೀ ಅವರ ಸರ್ಕಾರದ ಎಲ್ಲಾ ಯೋಜನೆಗಳು, ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸಿ ಅಭಿಯಾನವನ್ನು ಯಶಸ್ವಿಗೊಳಿಸೋಣ. ಮಗದೊಮ್ಮೆ ಮೋದಿಜೀ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಂಕಲ್ಪಕ್ಕೆ ಜೊತೆಯಾಗೋಣ.

ವಾರ್ಡ್ ಅಧ್ಯಕ್ಷರಾದ ಎಸ್ ಪಿ ದಿನೇಶ್, ರಾಜೇಂದ್ರ, ವೆಂಕಟೇಶ್, ಮುರುಗನ್, ಪ್ರಜ್ವಲ್, ಯೋಗೀಶ್, ಗಣೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...